ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

'ವಿಜ್ಞಾನ ಒಳತಿಗಾಗಿ ಬಳಸಬೇಕು'

Rashmi Kasaragodu
Updated On : 1 Mar 2014, 1:01 am

ಚಿಂತಾಮಣಿ: ವಿಜ್ಞಾನವನ್ನು ಮಾನವನ ಒಳತಿಗಾಗಿ ಮಾತ್ರ ಬಳಸಬೇಕು ಎಂದು ಶಿಕ್ಷಕ ಎನ್. ತ್ಯಾಗರಾಜ್ ತಿಳಿಸಿದರು.
ತಾಲೂಕಿನ ಮೈಲಾಂಡ್ಲಹಳ್ಳಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಮಾತನಾಡಿ, ವಿಜ್ಞಾನವನ್ನು ಸದುಪಯೋಗ ಪಡಿಸಿಕೊಂಡರೆ ಅಭಿವೃದ್ಧಿ, ದುರುಪಯೋಗ ಪಡಿಸಿಕೊಂಡರೆ ವಿನಾಶ ಖಚಿತವೆಂದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ಹಸೀನಾ ಬೇಗಂ ಮಾತನಾಡಿ, ಮಕ್ಕಳಿಗೆ ಚಿಕ್ಕಂದಿನಿಂದಲೇ ವಿಜ್ಞಾನದ ಬಗ್ಗೆ ಅರಿವು ಮೂಡಿಸಿದರೆ ಅವರ ಮುಂದಿನ ಭವಿಷ್ಯ ಉಜ್ವಲವಾಗುವುದೆಂದು ಹೇಳಿದರು.
ನಂತರ ಯುವ ಬರಹಗಾರ ಕೆ.ಎನ್. ಅಕ್ರಂಪಾಷ ಮಾತನಾಡಿದರು. ಶಾಲಾ ಮಕ್ಕಳಿಗಾಗಿ ರಸಪ್ರಶ್ನೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ಕೇಳಿದ ಹಲವಾರು ಪ್ರಶ್ನೆಗಳಿಗೆ ಸೂಕ್ತ ಉತ್ತರಗಳನ್ನು ನೀಡಿ ಅವರ ಸಂಶಯಗಳನ್ನು ನಿವಾರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement