ಇಂದು ಬಂಗಾರಪೇಟೆ ಬಂದ್
ರೈತ ಸಂಘದ ಅಧ್ಯಕ್ಷ ರಾಮೇಗೌಡ ಸಂಘದ ಹೆಸರಲ್ಲಿ ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿನಾಕಾರಣ ತೊಂದರೆ ಕೊಡುತ್ತಾ ಹಣ ಸುಲಿಗೆ ಮಾಡುತ್ತಿರುವುದನ್ನು ವಿರೋಧಿಸಿ ನಾಳೆ ಶನಿವಾರ ವರ್ತಕರು ತಮ್ಮ ಅಂಗಡಿಗಳನ್ನು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿ ರಾಮೇಗೌಡರನ್ನು ತಾಲೂಕಿನಿಂದ ಗಡಿಪಾರು ಮಾಡಲು ಸರ್ಕಾರದ ಮೇಲೆ ಒತ್ತಡ ಹೇರಲು ಬಂಗಾರಪೇಟೆ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ವರ್ತಕರ ಸಂಘದ ಅಧ್ಯಕ್ಷ ಗಿರೀಶ್ ಕುಮಾರ್ ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ವರ್ತಕರಾದ ಪಾರ್ಥಸಾರಥಿ, ಪುರಸಭೆ ಮಾಜಿ ಅಧ್ಯಕ್ಷರಾದ ಕೆ. ಚಂದ್ರಾರೆಡ್ಡಿ, ಶಂಷುದ್ದಿನ್ ಬಾಬು, ಪಿಚ್ಚಹಳ್ಳಿ ಗೋವಿಂದರಾಜು, ರಂಗರಾಮಯ್ಯ, ವೈ.ವಿ. ರಮೇಶ್, ಟೆಂಪೋ ಮಾಲೀಕರ ಸಂಘದ ಗಿರಿಶ್, ಪುರಸಭೆ ಸದಸ್ಯರಾದ ಅಣ್ಣಾದೊರೆ, ವೆಂಕಟೇಶಗೌಡ, ಪಂಚರ್ ವೆಂಕಟೇಶ್ ಮತ್ತಿತರರು ಇದ್ದರು.