ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವಾಹನ ಡಿಕ್ಕಿ; ಕೃಷ್ಣಮೃಗ ಸಾವು

Mainashree
Updated On : 3 Jan 2014, 11:02 am

ಕೋಲಾರ: ವನ್ಯ ಜೀವಿಗಳನ್ನು ರಕ್ಷಣೆ ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿರುವುದರಿಂದ ತಾಲೂಕಿನ ಕೋಟಗಾನಹಳ್ಳಿ ಅರಣ್ಯ ಪ್ರದೇಶದ ವನ್ಯ ಜೀವಿಗಳ ಪ್ರಾಣಕ್ಕೆ ಕುತ್ತುಂಟಾಗುತ್ತಿದೆ ಎಂದು ಹಸಿರು ಸೇನೆ ಜಿಲ್ಲಾಧ್ಯಕ್ಷ ಕೋಟಿಗಾನಹಳ್ಳಿ ಗಣೇಶ ಗೌಡ ಆರೋಪಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ಕೃಷ್ಣಮೃಗವೊಂದು ಕೋಟಿಗಾನಹಳ್ಳಿ ಅರಣ್ಯ ಪ್ರದೇಶದಿಂದ ಹೊರ ಬಂದು ರಸ್ತೆ ದಾಟುವಾಗ ಅಪರಿಚಿತ ವಾಹನಕ್ಕೆ ಸಿಲುಕಿ ಮೃತಪಟ್ಟಿದೆ. ಈ ರೀತಿ ಪ್ರತಿ ತಿಂಗಳು ಕನಿಷ್ಠ 3 ರಿಂದ 4 ಜಿಂಕೆಗಳು ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದರೂ ಅರಣ್ಯ ಇಲಾಖೆಯವರು ವನ್ಯ ಜೀವಿಗಳ ಸಂರಕ್ಷಣೆಗಾಗಿ ಕ್ರಮ ಕೈಗೊಂಡಿಲ್ಲವೆಂದು ದೂರಿದ್ದಾರೆ. ನೀರಿಗಾಗಿ ಪ್ರಾಣಿಗಳು ಕಾಡಿನಿಂದ ಹೊರ ಬರುವಂತಾಗಿದೆ, ಅರಣ್ಯ ಇಲಾಖೆಯವರು ಕೂಡಲೇ ಪ್ರಾಣಿಗಳು ಕಾಡಿನಿಂದ ಹೊರ ಬರದಂತೆ ತಂತಿ ಬೇಲಿ ಹಾಕಿ ಸಂರಕ್ಷಣೆ ಮಾಡಬೇಕು, ಕುಡಿಯಲು ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ. ಜಿಂಕೆ, ಮೊಲ, ನವಿಲು, ಮುಂಗುಸಿ, ಕಾಡು ಬೆಕ್ಕು ಮುಂತಾದ ಪ್ರಾಣಿಗಳು ಕೋಟಿಗಾನಹಳ್ಳಿ ಅರಣ್ಯ ಪ್ರದೇಶದಲ್ಲಿವೆ. ಇವುಗಳನ್ನು ಸಂರಕ್ಷಿಸಬೇಕು. ಕೋಲಾರ-ಬೇತಮಂಗಲ ರಸ್ತೆಯಲ್ಲಿ ವಾಹನಗಳ ಚಾಲಕರಿಗೆ ಪ್ರಾಣಿಗಳ ಬಗ್ಗೆ ಅರಿವು ಮೂಡಿಸಲು ಸೂಚನಾ ಫಲಕಗಳನ್ನು ಅಳವಡಿಸಬೇಕೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement