ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

'ಸೌಲಭ್ಯಗಳ ಸದ್ಬಳಕೆಯಾಗಲಿ'

Mainashree
Updated On : 3 Jan 2014, 11:02 am

ಗೌರಿಬಿದನೂರು: ಸರ್ಕಾರ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ನೀಡುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಿಧಾನಸಭೆ ಉಪಸಭಾಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದರು.
ಪಟ್ಟಣದ ಕೋಟೆ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ, ವಿಶ್ವ ಅಂಗವಿಕಲರ ದಿನಾಚರಣೆ, ಅಚಲ ಭಾರತಿ ಟ್ರಸ್ಟ್ ಬೆಂಗಳೂರು ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ಕಂಪ್ಯೂಟರ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರೊ.ಅ.ರಾ ಮಿತ್ರ ಮಾತನಾಡಿ, ತಾಲೂಕಿನ ಗ್ರಾಮೀಣ ಭಾಗದ 60 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತವಾಗಿ ಕಂಪ್ಯೂಟರ್ ವಿತರಿಸುತಿದೆ ಎಂದರು. ತಾಲೂಕಿನ 8ನೇ ತರಗತಿಯ 3,751 ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಮಾಡಲಾಯಿತು. ಅಂಗವಿಕಲ ಮಕ್ಕಳಿಗೆ ಹಮ್ಮಿಕೊಂಡಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ಅಂಗವಿಕಲ ಮಕ್ಕಳಿಗೆ ಬಹುಮಾನ ವಿರಿಸಲಾಯಿತು. ಅಂಗವಿಕಲ ಮಕ್ಕಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ, ಶಿಕ್ಷಕ ಗೋಪಿ, ಶಾಸಕ ಎನ್.ಎಚ್. ಶಿವಶಂಕರರೆಡ್ಡಿ, ಪ್ರೊ.ಅ.ರಾ ಮಿತ್ರ, ತಹಸೀಲ್ದಾರ್ ಡಾ.ಎನ್. ಭಾಸ್ಕರ್, ಇಒ ರೆಡ್ಡಪ್ಪ, ಜಿಪಂ ಸದಸ್ಯ ಕೇಶವರೆಡ್ಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement