6 ತಿಂಗಳಿಗೊಮ್ಮೆ ಗ್ರಾಮಗಳಿಗೆ ಭೇಟಿ: ಶಾಸಕರ ಭರವಸೆ
ಬಂಗಾರಪೇಟೆ: ಚುನಾವಣೆ ಸಮಯದಲ್ಲಿ ಮತದಾರರಿಗೆ ನೀಡಿದ್ದ ಭರವಸೆಯಂತೆ ಪ್ರತಿ ಆರು ತಿಂಗಳಿಗೊಮ್ಮೆ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸುವುದಾಗಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು. ತಾಲೂಕಿನ ಕಾಮಸಮುದ್ರ ಪಂಚಾಯ್ತಿಯ ಗ್ರಾಮಗಳ ಕುಂದು ಕೊರತೆಗಳನ್ನು ಆಲಿಸಿದರು. ಈ ವೇಳೆ ಗ್ರಾಮಸ್ಥರು ಹಲವಾರು ಸಮಸ್ಯೆಗಳನ್ನು ಶಾಸಕರ ಬಳಿ ಹೇಳಿ ಕೊಂಡರು. ತಾರತಮ್ಯ ಹೋಗಲಾಡಿಸಲು ತಮ್ಮ ಅವಧಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಅಧಿಕಾರಿಗಳು ಬರೀ ಸಂಬಳಕ್ಕಾಗಿ ಕೆಲಸ ಮಾಡದೆ ಮಾನವೀಯತೆ ಮೈಗೂಡಿಸಿಕೊಳ್ಳಬೇಕು ಹಾಗೂ ರೈತರು ಹಾಗೂ ಸಾರ್ವಜನಿಕರು ತಮ್ಮ ಕೆಲಸಗಳಿಗೆ ಕಚೇರಿಗಳಿಗೆ ಬಂದಾಗ ಅವರೊಂದಿಗೆ ಸೌಜನ್ಯವಾಗಿ ವರ್ತಿಸಿ ತ್ವರಿತವಾಗಿ ಮಾಡಿಕೊಡಬೇಕು ಎಂದು ಹೇಳಿದರು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಕೆ. ಚಂದ್ರಾರೆಡ್ಡಿ, ಪಿಚ್ಚಹಳ್ಳಿ ಗೋವಿಂದರಾಜು ಇದ್ದರು.