ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಯುವಜನತೆ ಕಾನೂನು ಮೀರಿ ಅಪರಾಧಿಗಳಾಕ್ತಾರೆ

Mainashree
Updated On : 6 Jan 2014, 11:32 am

ಕ.ಪ್ರ. ವಾರ್ತೆ  ಗುಡಿಬಂಡೆ  ಜ. 6
ಆಧುನಿಕತೆ ಹೆಸರಿನಲ್ಲಿ ಇಂದಿನ ಯುವಜನತೆ ಕಾನೂನಿನ ಚೌಕಟ್ಟು ಮೀರಿ ಅನೇಕ ರೀತಿಯಲ್ಲಿ ಅಪರಾಧಿಗಳಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಯುವಜನತೆ ಕಾನೂನು ಜಾಗೃತರಾಗಿ ಅಪರಾಧಿ ಜಗತ್ತಿನಿಂದ ದೂರ ಉಳಿಯಬೇಕೆಂದು ಜೆಎಂಎಫ್‌ಸಿ ನ್ಯಾಯಾಲಯದ ಸರ್ಕಾರಿ ಸಹಾಯಕ ಅಭಿಯೋಜಕ ಮಧುಸೂಧನ್ ರಾಮ್ ಸಲಹೆ ನೀಡಿದರು.
ಪಟ್ಟಣದ ಸಂತೆ ಮೈದಾನದ ಬಳಿಯಿರುವ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ಕೋಲಾರದ ನೆಹರು ಯುವಕೇಂದ್ರ, ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘ ಹಾಗೂ ಹೊಯ್ಸಳ ಯುವಕರ ಸಂಘ ಇವರ ಸಹಯೋಗದಲ್ಲಿ ಆಯೋಜಿಸಿದ್ದ ವಿಷಯಾಧಾರಿತ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗದೇ ಆರೋಗ್ಯವಂತರಾಗಿ ಜಾಗೃತಿಯನ್ನು ಹೊಂದಿ ರಾಷ್ಟ್ರವನ್ನು ಕಟ್ಟಿ ಬೆಳೆಸಬೇಕಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಮಹಾನ್ ನಾಯಕರ ಆದರ್ಶಗಳನ್ನು ಪಾಲಿಸಿ ದೇಶದ ಉತ್ತಮ ಪ್ರಜೆಗಳಾಗಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನೆಹರು ಯುವಕೇಂದ್ರದ ಜಿಲ್ಲಾ ಕಾರ್ಯಕ್ರಮಗಳ ಸಲಹಾ ಸಮಿತಿ ಅಧಿಕಾರೇತರ ಸದಸ್ಯರಾದ ವಕೀಲ ಉನ್ನತಿ ವಿಶ್ವನಾಥ್ ಮಾತನಾಡಿ, ಮಾದಕ ವಸ್ತುಗಳನ್ನು ಸೇವಿಸುವುದು, ಸಾಗಾಣಿಕೆ, ತಯಾರಿಕೆ, ಮಾರಾಟ ಮೊದಲಾದವು ಶಿಕ್ಷಾರ್ಹ ಅಪರಾಧಗಳಾಗಿವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ರಾಮನಾಥರೆಡ್ಡಿ, ಬಾಲ್ಯವಿವಾಹದ ಬಗ್ಗೆ ಜಾಗೃತಿ ಮೂಡಿಸಿ ಇಂದಿನ ಯುವಜನತೆ ಕಾನೂನಿನ ಅರಿವಿನ ಕೊರತೆಯಿಂದ ಮತ್ತು ಪ್ರೀತಿ ಪ್ರೇಮದ ಹೆಸರಿನಲ್ಲಿ ವಿವಾಹವಾಗಲು ಮುಂದಾಗುವುದು. ತದನಂತರ ಕಾನೂನಿನ ತೊಂದರೆಗೆ ಒಳಗಾಗುವ ಸಾಧ್ಯತೆಗಳು ಹೆಚ್ಚಾಗುತ್ತಿವೆ ಎಂದು ಹೇಳಿದರು. ಈ ವೇಳೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ಆಯೋಜಕರು ವಿತರಿಸಿದರು.
ಈ ಸಂದರ್ಭದಲ್ಲಿ ಪಪಂ ಮುಖ್ಯಾಧಿಕಾರಿ ಶ್ರೀರಾಮರೆಡ್ಡಿ, ವಕೀಲ ನಾರಾಯಣಸ್ವಾಮಿ, ಪತ್ರಕರ್ತರ ಸಂಘದ ಅಧ್ಯಕ್ಷ ಜೆ. ವೆಂಕಟರಾಯಪ್ಪ, ಗಾಂಧಿ ಗ್ರಾಮೀಣ ಅಭಿವೃದ್ಧಿ ಸಂಘದ ಎಲ್. ನಾಗರಾಜ್, ಸಮಾಜ ಕಲ್ಯಾಣ ಇಲಾಖೆಯ ರವಿ, ದಾಸಪ್ಪ, ಹೊಯ್ಸಳ ಸಂಘದ ಅಧ್ಯಕ್ಷ ವೆಂಕಟೇಶ್ ಬಾಬು, ಕಾರ್ಯದರ್ಶಿ ಮಂಜುನಾಥ, ಉನ್ನತಿ ಸಂಘದ ಎಸ್. ಮಂಜುನಾಥ್, ಮಂಜುನಾಥ್ ಸೇರಿದಂತೆ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement