ಶಿಡ್ಲಘಟ್ಟದಲ್ಲಿ ಬೀದಿ ನಾಯಿ ಹಾವಳಿ; ಜನರಿಗೆ ಪ್ರಾಣಸಂಕಟ
ಕ.ಪ್ರ. ವಾರ್ತೆ ಶಿಡ್ಲಘಟ್ಟ ಜ. 6
ಪಟ್ಟಣದಲ್ಲಿ ಜನರ ಪ್ರಾಣಗಳಿಗೆ ಕಂಟಕವಾಗಿರುವ ಬೀದಿ ನಾಯಿಗಳ ಹಾವಳಿಯನ್ನು ತಪ್ಪಿಸುವಂತೆ ಪಟ್ಟಣದ ಪುರಸಭಾ ಸದಸ್ಯರೂ ಸೇರಿದಂತೆ ನಾಗರೀಕರು ಪುರಸಭಾ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಪಟ್ಟಣದಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಬೀದಿನಾಯಿಗಳ ಹಾವಳಿಯಿಂದಾಗಿ ಶಾಲಾ ಮಕ್ಕಳೂ ಸೇರಿದಂತೆ ನಾಗರೀಕರು ಪಟ್ಟಣದಲ್ಲಿ ಸಂಚಾರ ಮಾಡಲು ಭಯಭೀತರಾಗಿದ್ದಾರೆ.
ಇದ್ದಕ್ಕಿದ್ದಂತೆ ಜನರ ಮೇಲೆ ಎರಗುತ್ತಿರುವ ನಾಯಿಗಳಿಂದಾಗಿ ಪಟ್ಟಣದಲ್ಲಿ ಸಂಚಾರ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ, ಅನೇಕ ಬಾರಿ ಮನವಿಗಳನ್ನು ಸಲ್ಲಿಸಿದ್ದರೂ ಪ್ರಾಣಿ ದಯಾ ಸಂಘದ ಹೆಸರಿನಲ್ಲಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಇದೇ ಪರಿಸ್ಥಿತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಪುರಸಭಾ ಕಾಯರಾಲಯದ ಮುಂದೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ ಮನವಿಯನ್ನು ಸ್ವೀಕರಿಸಿ ಮಾತನಾಡಿದ ಪುರಸಭಾ ಮುಖ್ಯಾಧಿಕಾರಿ ಚನ್ನರಾಯಪ್ಪ ಕೂಡಲೇ ಮನವಿಯನ್ನು ಉಪವಿಭಾಗಾಧಿಕಾರಿಗಳಿಗೆ ತಲುಪಿಸಿ ಸಮಸ್ಯೆಯ ಪರಿಹಾರಕ್ಕಾಗಿ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.