ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ: ವ್ಯಕ್ತಿ ಸಾವು
ಚಿಂತಾಮಣಿ: ಟ್ರ್ಯಾಕ್ಟರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಕಾರು ನುಜ್ಜುನೂರಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೋನಪ್ಪಲ್ಲಿ ಹತ್ತಿರ ಸೋಮವಾರ ರಾತ್ರಿ ನಡೆದಿದೆ. ಚಿಂತಾಮಣಿ-ಶಿಡ್ಲಘಟ್ಟ ಮಾರ್ಗವಾಗಿ ಸ್ವಿಪ್ಟ್ ಕಾರಿನಲ್ಲಿ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಶಿಡ್ಲಘಟ್ಟ ತಾಲೂಕಿನ ಕುಂದಲಗುರ್ಕಿ ಗ್ರಾಮದ ನಿವಾಸಿ ಚೌಡರೆಡ್ಡಿ(42) ಎಂಬಾತ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ವ್ಯಕ್ತಿಯೆಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯನಿಮಿತ್ತ ಚಿಂತಾಮಣಿ ನಗರಕ್ಕೆ ಆಗಮಿಸಿದ ಚೌಡರೆಡ್ಡಿ ಸೋಮವಾರ ರಾತ್ರಿ 11 ಗಂಟೆಯಲ್ಲಿ ಹಿಂತಿರುಗಿ ಹೋಗುವಾಗ ಎದುರುಗಡೆಯಿಂದ ಬಂದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಚೌಡರೆಡ್ಡಿ ಸಾವನ್ನಪ್ಪಿದ್ದು, ಕಾರು ನುಜ್ಜುನೂರಾಗಿರುವುದರಿಂದ ಹಲವು ಸಮಯ ಈ ರಸ್ತೆ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಸುದ್ದಿ ತಿಳಿದ ತಕ್ಷಣ ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕ ವೆಂಕಟೇಶಮೂರ್ತಿ ಸ್ಥಳ ಪರಿಶೀಲಿಸಿ ನಂತರ ವಾಹನಗಳನ್ನು ತೆರವುಗೊಳಿಸಲು ಮುಂದಾದರು. ಮೃತಪಟ್ಟ ಶವವನ್ನು ನಗರದ ಸರ್ಕಾರಿ ಸಾರ್ವಜನಿಕರ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮಾಂತರ ಠಾಣೆಯ ಪೊಲೀಸರು ಕೇಸ್ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.