ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಯಲುವಹಳ್ಳಿ ರಮೇಶ್‌ಗೆ ಜಯ: ಬೆಂಬಲಿಗರ ಸಂಭ್ರಮ

Vishwanath S
Updated On : 8 Jan 2014, 1:07 am

ಚಿಕ್ಕಬಳ್ಳಾಪುರ: ರಾಜ್ಯ ಒಕ್ಕಲಿಗೆ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಸತತವಾಗಿ ಮೂರು ಬಾರಿ ಗೆಲ್ಲುವುದರ ಮೂಲಕ ಯಲುವಹಳ್ಳಿ ರಮೇಶ್ ಹ್ಯಾಟ್ರಿಕ್ ಸಾಧಿಸಿದ್ದು ಅವರ ಬೆಂಬಲಿಗರು ನಗರದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿದರು.
ತಾಲೂಕಿನ ಯಲುವಹಳ್ಳಿ ಗ್ರಾಮದಲ್ಲಿ ದೇವರಿಗೆ ಪೂಜೆ ಸಲ್ಲಿಸುವ ಮೂಲಕ ವಿಜಯೋತ್ಸವ ಮೆರವಣಿಗೆಯನ್ನು ಪ್ರಾರಂಭಿಸಲಾಯಿತು. ಆ ನಂತರ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಮೆರವಣಿಗೆ ನಡೆಸಲಾಯಿತು. ಶಿಡ್ಲಘಟ್ಟ ವೃತ್ತ ಮತ್ತು ಬಲಮುರಿ ಗಣಪತಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಜೈ ಕಾರದ ಘೋಷಣೆಗಳೊಂದಿಗೆ ಜನರಿಗೆ ಸಿಹಿ ಹಂಚಿ ಸಂತಸವನ್ನು ವ್ಯಕ್ತಪಡಿಸಲಾಯಿತು. ಆ ನಂತರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಒಕ್ಕಲಿಗ ಸಂಘದ ನೂತನ  ನಿರ್ದೇಶಕ ಯಲುವಹಳ್ಳಿ ರಮೇಶ್, ಜನಾಂಗದ ಜನರು ತಮ್ಮ ಮೇಲೆ ನಂಬಿಕೆಯಿಟ್ಟು ಮೂರನೇ ಬಾರಿ ಗೆಲುವು ಸಾಧಿಸುವಂತೆ ಮಾಡಿದ್ದಾರೆ.ಜನರ ನಿರೀಕ್ಷೆಗಳನ್ನು ಎಂದಿಗೂ ಹುಸಿಗೊಳಿಸುವುದಿಲ್ಲ. ಮುಂದಿನ ದಿನಗಳಲ್ಲಿ ಜನಾಂಗದ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸಂಘಕ್ಕೆ ನೆರವು ನೀಡುತ್ತೇನೆ ಎಂದರು. ಈ ಸಂದರ್ಭದಲ್ಲಿ ಶಾಸಕ ಡಾ. ಕೆ.ಸುಧಾಕರ್ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement