ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

Vishwanath S
Updated On : 8 Jan 2014, 1:07 am

ಚಿಂತಾಮಣಿ: ಕೈವಾರ ಕ್ರಾಸ್ ಸುತ್ತ-ಮುತ್ತಲಿನ ಗ್ರಾಮಗಳಿಗೆ ಸಮರ್ಪಕ ನೀರು ಪೂರೈಕೆಗೆ ಒತ್ತಾಯಿಸಿ ಪೆರಮಾಚನಹಳ್ಳಿ ಗ್ರಾಪಂ ಕಾರ್ಯಾಲಯ ಮುತ್ತಿಗೆ ಹಾಕಿ ತಾಲೂಕು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತಾಲೂಕಿನ ಪೆರಮಾಚನಹಳ್ಳಿ ಗ್ರಾಪಂ ವ್ಯಾಪ್ತಿಯ ಕೈವಾರ ಕ್ರಾಸ್ ಕೊಂಗನಹಳ್ಳಿ, ನಾಯಿಂದ್ರಹಳ್ಳಿ ಕಾಲೋನಿ ಸೇರಿದಂತೆ ಇನ್ನೂ ಹಲವು ಗ್ರಾಮಗಳಿಗೆ ನೀರಿನ ಸಮಸ್ಯೆ ತಾಂಡವಾಡುತ್ತಿದ್ದರೂ ಗ್ರಾಪಂ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಿಡಿಒಗಳು ಜನರಿಗೆ ಬಾಯಿ ಮಾತಿನಲ್ಲಿ ಭರವಸೆ ನೀಡುತ್ತಿರುವ ಕಾರ್ಯ ವೈಖರಿ ವಿರುದ್ಧ ಕರವೇ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪಂಚಾಯ್ತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಅಂಬರೀಷ್ ಮಾತನಾಡಿ, ಗ್ರಾಮೀಣ ಜನರಿಗೆ ಬೇಸಿಗೆ ಬರುವ ಮುನ್ನವೇ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಕುಡಿವ ನೀರಿನ ಬಗ್ಗೆ ಎಚ್ಚೆತ್ತುಕೊಳ್ಳದೆ ನಿರ್ಲಕ್ಷ್ಯದಿಂದಾಗಿ, ಸಮಸ್ಯೆ ಬಗೆಹರಿಸುವಲ್ಲಿ ಬಗೆಹರಿಸುವಲ್ಲಿ ವಿಫಲಗೊಂಡಿದ್ದಾರೆ ಎಂದು ಆರೋಪಿಸಿದರು.  
ಕರವೇ ಪ್ರಮುಖರಾದ ಮಾ.ಷ.ಚಂದ್ರಶೇಖರ್, ಕೈವಾರ ಹೋಬಳಿ ಅಧ್ಯಕ್ಷ ಕೆ.ವಿ.ಶಂಕರ್, ನಾರಾಯಣಸ್ವಾಮಿ, ಶಬೀರ್ ಪಾಷಾ, ಕೆಂಪರೆಡ್ಡಿ, ಆಂಜಪ್ಪ, ಚಂದ್ರ, ಬೈರಾರೆಡ್ಡಿ, ಸುನಿಲ್ ಮತ್ತಿತರರು ಪ್ರತಿಭಟನೆ ನೇತೃತ್ವ  ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement