ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಶಾಸಕ ನಾರಾಯಣಸ್ವಾಮಿ ಕ್ಷೇತ್ರ ಪ್ರವಾಸ

Vishwanath S
Updated On : 11 Jan 2014, 1:25 am

ಬಂಗಾರಪೇಟೆ: ಕಳೆದ 6 ತಿಂಗಳಿಂದ ಕ್ಷೇತ್ರ ಪ್ರವಾಸ ಮಾಡಿ ಸಮಸ್ಯೆಗಳನ್ನು ಆಲಿಸಲಾಗುತ್ತಿದೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು. ತಾಲೂಕಿನ ಚಿನ್ನಕೋಟೆ ಹಾಗೂ ದೊಡ್ಡವಲಗಮಾದಿ ಪಂಚಾಯ್ತಿಗಳಲ್ಲಿ ಪ್ರತಿಹಳ್ಳಿಗೂ ತೆರಳಿ ಗ್ರಾಮಸ್ಥರ ನೈಜ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ ಎಂದು ಗ್ರಾಮ ಪ್ರವಾಸದಲ್ಲಿ ಮಾತನಾಡಿದ ಅವರು, ಈ ಹಿಂದೆ ಕ್ಷೇತ್ರವನ್ನು ನಾಲ್ಕೈದು ಬಾರಿ ಆಯ್ಕೆಯಾಗಿರುವ ಶಾಸಕರ ನಿರ್ಲಕ್ಷ್ಯದಿಂದ ಸಮಸ್ಯೆಗಳು ಹೋದಲೆಲ್ಲಾ ಸಮಸ್ಯೆಗಳು ಕಣ್ಣಿಗೆ ರಾಚುತ್ತಿದೆ ಎಂದು ತಿಳಿಸಿದರು. ಕ್ಷೇತ್ರದಲ್ಲಿ ಬರವಿರುವುದರಿಂದ ಯಾವುದೇ ಸಮಸ್ಯೆಗಳು ಬಾರದಂತೆ ಹೆಚ್ಚು ನಿಗಾವಹಿಸಲಾಗಿದೆ. ಕುಡಿಯುವ ನೀರಿನ ಅಭಾವ ಬಾರದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಅಧಿಕಾರಿಗಳು ಸಕಾಲಕ್ಕೆ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಸೂಚನೆ ನೀಡಿದರು. ಸರ್ಕಾರದ ಯೋಜನೆಗಳು ನೇರವಾಗಿ ಜನರಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಸರ್ಕಾರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಲು ಮುಂದಾಗಿದೆ ಇದು ಅರ್ಹರಿಗೆ ತಲುಪಿದರೆ ಮಾತ್ರ ಸರ್ಕಾರದ ಉದ್ದೇಶ ಪೂರೈಕೆಯಾಗುವುದು ಎಂದು ಹೇಳಿದರು. ಶಾಸಕರ ಜೊತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ, ಮುಖಂಡ ಹೊಸರಾಯಪ್ಪ, ಕೆಂಪಣ್ಣ, ತಾಪಂ ಸದಸ್ಯೆ ಚಂದ್ರಮ್ಮ, ಇಒ ಭಟ್, ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement