ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಮರ್ಪಕ ವಿದ್ಯುತ್‌ಗೆ ಆಗ್ರಹಿಸಿ ಪ್ರತಿಭಟನೆ

Vishwanath S
Updated On : 14 Jan 2014, 1:23 am

ಗುಡಿಬಂಡೆ: ತಾಲೂಕಿನಾದ್ಯಂತ ಈಗಾಗಲೇ ವಾಣಿಜ್ಯ ಬೆಳೆಗಳನ್ನು ಹಾಕಿದ್ದು, ಬೆಸ್ಕಾಂ ಇಲಾಖೆ ದಿಢೀರನೆ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಬೆಳೆಗಳು ಒಣಗಿಹೋಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ನೂರಾರು ರೈತರು ಬೆಸ್ಕಾಂ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು.
ಈ ವೇಳೆ ಮಾತನಾಡಿದ ಎಚ್.ಪಿ. ಲಕ್ಷ್ಮೀನಾರಾಯಣ, ತಾಲೂಕಿನಾದ್ಯಂತ ಕೊಳವೆ ಬಾವಿಗಳನ್ನು ನಂಬಿಕೊಂಡು ಸಾವಿರಾರು ಎಕರೆ ಪ್ರದೇಶದಲ್ಲಿ ಆಲೂಗಡ್ಡೆ, ಟೊಮೇಟೋ, ಕೋಸು ಮುಂತಾದ ವಾಣಿಜ್ಯ ಬೆಳೆಗಳನ್ನು ಬಿತ್ತನೆ ಮಾಡಿದ್ದು, ಕೊಳವೆ ಬಾವಿಗಳ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕೊರೆತೆ ಕಾಡುತ್ತಿದ್ದು, ಈಗ ದಿಢೀರನೇ ವಿದ್ಯುತ್‌ನ ಅಸಮರ್ಪಕ ಪೂರೈಕೆಯಿಂದ ರೈತ ಕಂಗಾಲಾಗಿದ್ದಾನೆ. ಸಾಲ ಮಾಡಿ ಬೆಳೆಯಲಾಗಿದ್ದು, ಸಾಲ ತೀರಿಸುವುದು ಕಷ್ಟ ಎಂಬ ಸ್ಥಿತಿಯಲ್ಲಿ ರೈತನಿದ್ದಾನೆ. ಆದ್ದರಿಂದ ಈ ಕೂಡಲೇ ಸಮರ್ಪಕ ವಿದ್ಯುತ್ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಸ್ಥಳಕ್ಕೆ ಆಗಮಿಸಿದ ಕಾರ್ಯನಿರ್ವಾಹಕ ಎಂಜಿನಿಯರ್ ಜತೆ ಪ್ರತಿಭಟನಾಕಾರರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಅಧಿಕಾರಿ ನಡುವೆ ಸ್ವಲ್ಪ ಕಾಲ ಮಾತಿನ ಚಕಮಕಿ ನಡೆದು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವ ತನಕ ಪ್ರತಿಭಟನೆ ಹಿಂಪಡೆಯುವುದಿಲ್ಲವೆಂದು ಪಟ್ಟು ಹಿಡಿದರು. ಈ ವೇಳೆ ಕಾರ್ಯನಿರ್ವಾಹಕ ಎಂಜನಿಯರ್ ಶಶಿಧರ್ ತಮ್ಮ ಮೇಲಾಧಿಕಾರಿ ಜತೆ ಚರ್ಚಿಸಿ 48 ಗಂಟೆಯೊಳಗೆ ಸಮಸ್ಯೆ ಪರಿಹರಿಸುವುದಾಗಿ ಭರಸವಸೆ ನೀಡಿದ್ದರಿಂದ ಪ್ರತಿಭಟನೆ ಕೈಬಿಡಲಾಯಿತು. ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಶ್ರೀನಿವಾಸ, ಪಾವಜೇನಹಳ್ಳಿ ನಾರಾಯಣಸ್ವಾಮಿ, ನರಸಾರೆಡ್ಡಿ, ಗೋಪಾಲಪ್ಪ, ಮುನಿರೆಡ್ಡಿ ಸೇರಿದಂತೆ ಹಲವರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement