ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

'ಆರ್ಥಿಕ ಅಭಿವೃದ್ಧಿಗೆ ಸಹಕಾರ ಸಂಘಗಳು ಅಗತ್ಯ'

Vishwanath S
Updated On : 17 Jan 2014, 1:00 am

ಮಂಡ್ಯ: ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರ ಸಂಘಗಳ ಅಗತ್ಯವಿದ್ದು, ಬೀದಿಯಲ್ಲಿ ನಿಂತು ಹೋರಾಟ ಮಾಡುವುದರಿಂದ ಆರ್ಥಿಕವಾಗಿ ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಂ.ಸಿ. ಲಕ್ಷ್ಮಣ್ ಗುರುವಾರ ಹೇಳಿದರು.
ನಗರದ ಗಾಂಧಿಭವನದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ವಿವಿದ್ಧೋಶ ಸಹಕಾರ ಸಂಘವನ್ನು ಪ್ರಾರಂಭಿಸುವ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಕೇವಲ ಹೋರಾಟ ಮಾಡುವುದರಿಂದ ಆರ್ಥಿಕ ಅಭಿವೃದ್ಧಿ ಸಾಧಿಸಲು ಆಗುವುದಿಲ್ಲ. ಬದಲಿಗೆ ಉತ್ತಮ ಕೆಲಸ ಮಾಡುವ ಮೂಲಕ ಆರ್ಥಿಕ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು. ಹಣವಂತರಿಗೆ ಮಾತ್ರ ಸಂಘಗಳು ಸೀಮಿತವಾಗಿಲ್ಲ. ಕಟ್ಟಡ ಕಾರ್ಮಿಕರಿಗೆ, ಬೀಡಿ ಕಟ್ಟುವವರಿಗೆ, ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಸಹಕಾರ ಸಂಘಗಳು ಎಲ್ಲರನ್ನೂ ಒಗ್ಗೂಡಿಸಿ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಬೇಕು ಎಂದು ಲಕ್ಷ್ಮಣ್ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕೃಷಿ ಕೂಲಿಕಾರರ ಅಧ್ಯಕ್ಷ ಎಂ.ಪುಟ್ಟಮಾದು, ಕೆ. ಬಸವರಾಜು, ಸಿ. ಕುಮಾರಿ, ಟಿ.ಎಚ್. ಆನಂದ್, ಅಬ್ದುಲ್ಲಾ, ಕೆ. ಹನುಮೇಗೌಡ, ಡಿ.ಸಿ. ಚೌಡೇಗೌಡ, ಬಿ. ಹನುಮೇಶ್, ಶಿವಬೋರಯ್ಯ, ಯಶೋಧ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement