ಆರ್‌ಟಿಇ; ಮಾಹಿತಿ ನೀಡುವಲ್ಲಿ ಇಲಾಖೆ ವಿಫಲ
ಚಿಂತಾಮಣಿ: ಕ್ಷೇತ್ರ ಶಿಕ್ಷಣಾಧಿಕಾರಿಗಳು ಗ್ರಾಪಂ ಹಾಗೂ ನಗರಸಭೆ ಜನಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ ಶಿಕ್ಷಣ ಕಾಯ್ದೆ(ಆರ್‌ಟಿಇ) ಕಾರ್ಯಾಗಾರ ಕಾಟಾಚಾರಕ್ಕೆ ನಡೆಸಿರುವ ಬಗ್ಗೆ ಸಾರ್ವಜನಿಕರು ಅಸಮದಾನ ವ್ಯಕ್ತಪಡಿಸಿದ್ದಾರೆ.
ನಗರದ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಶಿಕ್ಷಣ ಇಲಾಖೆ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಣ ಕಾಯ್ದೆ 2009 (ಆರ್.ಟಿ.ಇ) ಬಗ್ಗೆ ಅರಿವು ಮೂಡಿಸಲು ತಾಲೂಕಿನ ಎಲ್ಲಾ ಗ್ರಾಪಂ ಹಾಗೂ ನಗರಸಭೆ ಅಧ್ಯಕ್ಷರು ಉಪಾಧ್ಯಕ್ಷ ಮತ್ತು ಸದಸ್ಯರಿಗೆ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೂರ್ವ ಸಿದ್ಧತೆಗಳು ಕೈಗೊಳ್ಳದೆ ಕಾಟಾಚಾರಕ್ಕೆ ಕಾರ್ಯಾಗಾರ ನಡೆಸಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ನಿಯಮಗಳ ಪ್ರಕಾರ ಎಲ್‌ಕೆಜಿಯಿಂದ ಯುಕೆಜಿ ತನಕ ಉಚಿತ ಪ್ರವೇಶವನ್ನು ಆರ್‌ಟಿಇ ನಿಯಮಗಳ ಪ್ರಕಾರ ಪಡೆಯಬೇಕಾದ ಅರ್ಹ ಮಕ್ಕಳಿಗೆ ಶಿಕ್ಷಣ ವಂಚನೆ ಮಾಡಿ ಜನ ಸಮಾನ್ಯರಿಗೆ ಅರಿವು ಮೂಡಿಸದೆ ಬಡ ಮಕ್ಕಳಿಗೆ ಅನ್ಯಾಯ ಮಾಡುತ್ತಿರುವುದಾಗಿ ಆರೋಪಿಸಿದ್ದಾರೆ.
ಇನ್ನು ಮುಂದಾದರೂ ಸಂಬಂಧಪಟ್ಟ ಮೇಲಾಧಿಕಾರಿಗಳು ಮಕ್ಕಳ ಹಕ್ಕು ನಿಯಮಗಳ ಬಗ್ಗೆ ಅರಿವು ಮೂಡಿಸಿದಲ್ಲಿ ಮಕ್ಕಳು ಶಿಕ್ಷಣ ಪಡೆಯಲು ಸಹಾಯವಾಗುತ್ತದೆ ಎಂದು ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ.