ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

Vishwanath S
Updated On : 17 Jan 2014, 1:00 am

ಬಾಗೇಪಲ್ಲಿ: ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ತಾಲೂಕಿನ ಮಾರ್ಗಾನುಕುಂಟೆ ಹಾಗೂ ಕೊತ್ತಕೋಟೆ ಗ್ರಾಮದ ರೈತರು ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಶ್ರೀನಿವಾಸರೆಡ್ಡಿ, ಬೆಸ್ಕಾಂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದ ಕಳೆದ ಒಂದು ತಿಂಗಳಿಂದ ಕಡಿಮೆ ಮೊಲ್ಟೇಜಜ್ವಿದ್ಯುತ್ ಸರಬರಾಜು ಆಗುತ್ತಿರುವುದರಿಂದ ಈ ಭಾಗದ ಬಹುತೇಕ ಕೊಳವೆ ಬಾವಿಗಳಿಗೆ ಅಳವಡಿಸಿರುವ ಮೋಟರ್‌ಗಳು ಸುಟ್ಟು ಹೋಗಿವೆ. ರೈತರು ಬೆಳೆದಿರುವ ಬೆಳೆಗಳಿಗೆ ನೀರು ಇಲ್ಲದೇ ಬೆಳೆಗಳೆಲ್ಲ ನಾಶವಾಗಿರುವುದರಿಂದ ಈ ಭಾಗದ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.
ಗ್ರಾಮಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಬೆಸ್ಕಾಂ ಅಧಿಕಾರಿಗಳಿಗೆ ಅನೇಕ ಬಾರಿ ದೂರು ನೀಡಿದರೂ ಅಧಿಕಾರಿಗಳು ಸಮಸ್ಯೆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಂತರ ಸ್ಥಳಕ್ಕೆ ಆಗಮಿಸಿದ ಬೆಸ್ಕಾಂ ಇಲಾಖೆಯ ತಾಲೂಕು ಅಧಿಕಾರಿ ಎಇ ಬಾಲಾಜಿ ಜಿಲ್ಲೆಯ ಹಿರಿಯ ಅಧಿಕಾರಿಗೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಇರುವಂತಹ ಗ್ರಾಮಗಳಿಗೆ ಇಂದೇ ಭೇಟಿ ನೀಡಿ ನಿಮ್ಮ ಸಮಸ್ಯೆಗೆ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ ನಂತರ ರೈತರು ಪ್ರತಿಭಟನೆಯನ್ನು ವಾಪಸ್ ಪಡೆದರು. ಇದಕ್ಕೂ ಮುನ್ನಾ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ರೈತರು ರಸ್ತೆ ನಡೆಸುತ್ತಿದ್ದ ಸಮಯದಲ್ಲಿ ಪೊಲೀಸ್ ಪೇದೆ ಮತ್ತು ರೈತರ ನಡುವೆ ಮಾತನ ಚಕಮುಕಿ ನಡೆಯಿತು. ರೈತರು ರಸ್ತೆ ತಡೆ ನಡೆಸಿದ್ದರಿಂದ ಕೆಲವು ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement