ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

'ಯೋಜನೆಗಳು ಸದುಪಯೋಗವಾಗಲಿ'

Vishwanath S
Updated On : 20 Jan 2014, 12:27 pm

ಕೆಜಿಎಫ್: ಕೇಂದ್ರ ಸರ್ಕಾರ ಬಡಕುಟುಂಬಗಳಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು ಅರ್ಹಪಲಾನುಭವಿಗಳು ಇಂತಹ ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.
ಬಾಬು ಜಗಜೀವನ್‌ರಾಮಜೀ ತೆಲುಗು ಮಹಾ ಸಭಾ ವತಿಯಿಂದ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರು ಮತ್ತು ಜಿಲ್ಲಾ ಸಫಾಯಿ ಕರ್ಮಚಾರಿ ಉಪಾಧ್ಯಕ್ಷ ಒ.ವಿ. ಡೇವಿಡ್ ಅಧ್ಯಕ್ಷತೆಯಲ್ಲಿ ಕೆಜಿಎಫ್ ನೆಹರು ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬಡವರಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ವೇಳೆ ಸುಮಾರು 58 ಮಂದಿ ಸಫಾಯಿ ಕರ್ಮಚಾರಿ ಕುಟುಂಬಗಳಿಗೆ ಮಂಜೂರಾತಿ ಅದೇಶ ಪತ್ರಗಳನ್ನು ಕೇಂದ್ರ ಸಚಿವರು ವಿತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಒ.ವಿ. ಡೇವಿಡ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದುಳಿದ ಬಡಕುಟುಂಬಗಳಿಗೆ ಮತ್ತು ಸಫಾಯಿ ಕರ್ಮಚಾರಿಗಳಿಗೆ ಮುಂದಿನ ಉದ್ಯೋಗವನ್ನು ಕಲ್ಪಿಸಿಕೊಳ್ಳಲು ಹಾಗೂ ಜೀವನೋಪಯಕ್ಕೆ ವಿವಿಧ ರೀತಿಯ ಸಾಲ ಸೌಲಭ್ಯ ಜಾರಿಗೊಳಿಸಿದ್ದು ಮಾದಿಗ ಸಮುದಾಯದ ಮತ್ತು ಸಫಾಯಿ ಕರ್ಮಚಾರಿಗಳಿಗೆ ಹೆಚ್ಚಿನ ಅನುಕೂಲಗಳನ್ನು ಮಾಡಿದೆ ಎಂದರು.
ರಾಜ್ಯ ಕಾಂಗ್ರೆಸ್ ಮಹಿಳಾ ಉಪಾಧ್ಯಕ್ಷೆ ರೂಪಾಶಶಿಧರ್, ಜಿಪಂ ಸದಸ್ಯ ಆ.ಮು. ಲಕ್ಷ್ಮೀನಾರಾಯಣ, ನಾರಾಯಣರೆಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement