ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಛಲದಿಂದ ಶ್ರಮಿಸಿದರೆ ಗುರಿ ಮುಟ್ಟಲು ಸಾಧ್ಯ

Rashmi Kasaragodu
Updated On : 23 Jan 2014, 2:12 am

ಚಿಕ್ಕಬಳ್ಳಾಪುರ; ಗಟ್ಟಿಯಾದ ಆತ್ಮವಿಶ್ವಾಸವನ್ನು ಹೊಂದಿ ಛಲದಿಂದ ಶ್ರಮಿಸಿದರೆ ಜೀವನದಲ್ಲಿ ಗುರಿ ಸಾಧಿಸಬಹುದೆಂದು ಬಿಜಿಎಸ್ ಶಿಕ್ಷಣ ಸಂಸ್ಥೆಯ ಸಲಹೆಗಾರ ಪ್ರೊ. ಶಿವರಾಮರೆಡ್ಡಿ ಅಭಿಪ್ರಾಯಪಟ್ಟರು.
ನಗರದ ಹೊರ ವಲಯದ ಬಿಜಿಎಸ್ ವರ್ಲ್ಡ್ ಸ್ಕೂಲ್ ನಲ್ಲಿ ಆಯೋಜಿಸಿದ್ದ ಗ್ರ್ಯಾಜುಯೇಷನ್ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳು ಚಿಕ್ಕ ವಯಸ್ಸಿನಲ್ಲಿಯೇ ಸ್ಪಷ್ಟವಾಗಿ ಗುರಿಯನ್ನು ನಿರ್ಧರಿಸಿಕೊಳ್ಳಬೇಕು. ಜೊತೆಗೆ ಗುರಿಯನ್ನು ಮುಟ್ಟೆ ಮುಟ್ಟುತ್ತೇನೆ ಎಂಬ ಆತ್ಮವಿಶ್ವಾಸ ಹೊಂದಿರಬೇಕು. ಇದಕ್ಕೆ ಪೂರಕವಾದ ವಾತಾವರಣವನ್ನು ಸ್ವಯಂ ನಿರ್ಮಿಸಿಕೊಂಡು ಯಶಸ್ಸು ಸಾಧಿಸಬೇಕು ಎಂದರು. ಅದಿಚುಂಚನಗಿರಿ ಶಾಖಾ ಮಠದ ಸಿದ್ದೇಶ್ವರನಾಥ ಸ್ವಾಮೀಜಿ ಮಾತನಾಡಿ, ಆಕರ್ಷಕವಾಗಿ ಹೂ ಅರಳಿ ತನ್ನ ಸುವಾಸನೆಯಿಂದ ಎಲ್ಲರ ಗಮನ ಸೆಳೆಯುತ್ತದೆ. ಅದೇ ರೀತಿ ಹೂವಿನಂತಹ ಮನಸ್ಸನ್ನು ಹೊಂದಿರುವ ಮಕ್ಕಳು ಅರಳಬೇಕು. ಸಾಧನೆಯನ್ನು ಮಾಡಿ ಎಲ್ಲರ ಗಮನವನ್ನು ತಮ್ಮತ್ತ ಸೆಳೆಯಬೇಕೆಂದು ಸಲಹೆ ನೀಡಿದರು.
ಆಕರ್ಷಕ ಕಾರ್ಯಕ್ರಮ; ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ವೈಜ್ಞಾನಿಕ ವಸ್ತುಗಳನ್ನು ತಯಾರಿಸಿ ಗಮನ ಸೆಳೆದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಆಕರ್ಷಕವಾಗಿ ನಡೆದವು. ಹೆಚ್ಚಿಗೆ ಅಂಕ ಪಡೆದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.  


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement