ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವಸ್ತು ಪ್ರದರ್ಶನಗಳಿಗೆ ಪ್ರೋತ್ಸಾಹ ಅಗತ್ಯ

Rashmi Kasaragodu
Updated On : 23 Jan 2014, 2:13 am

ಗೌರಿಬಿದನೂರು: ವಸ್ತು ಪ್ರದರ್ಶನಗಳಿಗೆ ಭೇಟಿ ನೀಡುವ ಮೂಲಕ ರೈತರು ಮತ್ತು ಗ್ರಾಹಕರು ಉತ್ತಮ ಗುಣಮಟ್ಟದ ವಸ್ತುಗಳನ್ನು ನ್ಯಾಯವಾದ ಬೆಲೆಗೆ ಕೊಳ್ಳಬಹುದು ಎಂದು ಜಿಪಂ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್ ತಿಳಿಸಿದರು.
ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಕೃಷಿ ಮತ್ತು ಗ್ರಾಹಕರ ಅಭಿವೃದ್ಧಿ ಪ್ರದರ್ಶಕರು 3 ದಿನಗಳಕಾಲ ಹಮ್ಮಿಕೊಂಡಿರುವ ಉತ್ಸವ ವಸ್ತು ಪ್ರದರ್ಶನದ ಉದ್ಘಾಟನೆ ಮಾಡಿ ಮಾತನಾಡಿದರು. ವೃತ್ತ ನಿರೀಕ್ಷಕ ಕೆ. ನಾಗರಾಜ್ ಮಾತನಾಡಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ವಸ್ತುಗಳ ಬಗ್ಗೆ ಮಾಹಿತಿ ಪಡೆದು ಅವುಗಳನ್ನು ಖರೀದಿಸುವ ಮೂಲಕ ಪ್ರದರ್ಶಕರನ್ನು ಪ್ರೋತ್ಸಾಹಿಸಬೇಕೆಂದರು.
ಆಯೋಜಕ ಸುರೇಶ್ ಮಾತನಾಡಿ, ಬೇಡಿಕೆ ಮತ್ತು ಅವಶ್ಯಕತೆಗೆ ತಕ್ಕಂತಹ ವಸ್ತುನಿಷ್ಠ ಬೆಲೆಗೆ ಗ್ರಾಹಕರಿಗೆ ಬೇಕಾದ ವಸ್ತುಗಳನ್ನು ಕೊಳ್ಳಲು ಸಹಾಯಕವಾಗುವಂತೆ ಇಂತಹ ಪ್ರದರ್ಶನಗಳನ್ನು ಏರ್ಪಡಿಸುವ ಮೂಲಕ ಉದ್ದಿಮೆಗಳ ವಹಿವಾಟಿಗೆ ಪ್ರೋತ್ಸಾಹ ನೀಡುವುದು ಉತ್ಸವದ ಉದ್ದೇಶ ಎಂದರು. ಕಸಾಪ ತಾಲೂಕು ಅಧ್ಯಕ್ಷ ಡಿ.ಜೆ. ಚಂದ್ರಮೋಹನ್, ಪುರಸಭೆ ಸದಸ್ಯ ವಿ. ರಮೇಶ್, ಮಂಜುನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement