ಹಲ್ಲೆ ಮಾಡಿದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಧರಣಿ
ಮಾಲೂರು: ಕೋಲಾರದಲ್ಲಿ ಡಿವೈಎಫ್ಐ ಮುಖಂಡನ ಮೇಲೆ ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ಶೀಘ್ರ ಬಂಧಿಸಬೇಕೆಂದು ಒತ್ತಾಯಿಸಿ ಇಲ್ಲಿನ ಡಿವೈಎಫ್ಐ ಕಾರ್ಯಕರ್ತರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನೆಡೆಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಸಂಘಟನೆ ಅಧ್ಯಕ್ಷ ವೆಂಕಟಾಚಲಪತಿ, ಕೋಲಾರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಭಾಗವಹಿಸಿದ್ದ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ವಿಜಯಕೃಷ್ಣನ ಮೇಲೆ ಹಲ್ಲೆ ಮಾಡಿದ ಮಂಜುನಾಥ್ ಹಾಗೂ ರಮೇಶರನ್ನು ಈ ಕೊಡಲೇ ಬಂಧಿಸಿಬೇಕು ಎಂದು ಅಗ್ರಹಿಸಿದರು. ಘಟನೆ ನಡೆದು ಮೂರು ದಿನಗಳಾದರೂ ರೌಡಿಸಂ ನಡೆಸಿದ ವ್ಯಕ್ತಿಗಳನ್ನು ಬಂಧಿಸದೆ ಇರುವುದು ಪೊಲೀಸರ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು. ಕಾರ್ಯದರ್ಶಿ ಮುನಿವೆಂಕಟಪ್ಪ, ಬಿ.ವಿ. ರಾಧ, ಮುನಿರಾಜು, ಅರುಣ್ ಕುಮಾರ್, ಶ್ರೀನಿವಾಸ್, ಶಂಕರ್, ದಿವ್ಯಾ, ಶರತ್, ಉಮೇಶ್ ಇದ್ದರು.