ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

31 ರಂದು ಚಿಕ್ಕಬಳ್ಳಾಪುರ ಜಿಲ್ಲೆ ಬಂದ್

Rashmi Kasaragodu
Updated On : 24 Jan 2014, 2:25 am

ಚಿಂತಾಮಣಿ: ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಜ.31 ರಂದು ಚಿಕ್ಕಬಳ್ಳಾಪುರ ಜಿಲ್ಲೆ ಬಂದ್ಗೆ ಕರೆ ನೀಡಿರುವುದಾಗಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಆಂಜನೇಯರೆಡ್ಡಿ ಹೇಳಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಎಲ್ಲಾ ಪ್ರಗತಿಪರ ಸಂಘಟನೆಗಳು ಹಾಗೂ ವಿವಿಧ ಸ್ವಯಂ ಸ್ರೇವಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸಭೆ ಕರೆದು ಜ.31 ರಂದು ಜಿಲ್ಲೆ ಬಂದ್ಗೆ ಕರೆ ನೀಡಿ ಪೂರ್ವಬಾವಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.  ಪರಮಶಿವಯ್ಯ ವರದಿಗೆ ಬದಲಾಗಿ ಸುಳ್ಳು ಭರವಸೆ ನೀಡಿ ಲೋಕಸಭಾ ಚುನಾವಣೆಯಲ್ಲಿ ಮತ ಪಡೆಯಲು ಗಿಮಿಕ್ ರಾಜಕಾರಣವನ್ನು ಇಬ್ಬರು ಕೇಂದ್ರ ಸಚಿವರು ಮಾಡುತ್ತಿದ್ದಾರೆಂದು ಆಂಜನೇಯರೆಡ್ಡಿ ಆರೋಪಿಸಿದರು. ಬಂದ್ಗೆ ನಾಗರಿಕರು ಸಹಕಾರ ನೀಡಿ ಹೋರಾಟಕ್ಕೆ ಮುಂದಾಗಬೇಕೆಂದು ಮನವಿ ಮಾಡಿದರು. ಸಭೆಯಲ್ಲಿ ಭಾಗವಹಿಸಿದ್ದ ರಕ್ಷಣಾ ವೇದಿಕೆ, ರೈತಸಂಘ, ದಲಿತ ಸಂಘರ್ಷ ಸಮಿತಿ, ಕುಂಬಾರರ ಸಂಘ, ಕನ್ನಡಸೇನೆ, ಜಯ ಕರ್ನಾಟಕ, ವಾಲ್ಮೀಕಿ ಸಂಘ, ಕುರುಬರ ಸಂಘ,ಬಲಿಜ ಸಂಘ, ಯಾದವ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement