ದಾನಿಗಳು ಮುಂದಾದರೆ ಸರ್ಕಾರಿ ಶಾಲೆ ಅಭಿವೃದ್ಧಿ'
ಮುಳಬಾಗಲು: ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಕೊರತೆಗಳಿದ್ದು, ದಾನಿಗಳು ಮುಂದಾದರೆ ಗುಣಮಟ್ಟದ ಶಿಕ್ಷಣ ನೀಡಬಹುದೆಂದು ಎಂವಿಕೆ ಪ್ರೌಢಶಾಲೆ ಅಧ್ಯಕ್ಷ ಉತ್ತನೂರು ಶ್ರೀನಿವಾಸ್ ತಿಳಿಸಿದರು.
ತಾಲೂಕಿನ ಉತ್ತನೂರು ಎಂವಿಕೆ ಪ್ರೌಢಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬನಹಳ್ಳಿ ಶಾಲೆಗಳ ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿಗಳಿಗೆ ಉಚಿತ ಪಾದರಕ್ಷೆ ವಿತರಣಾ ಸಮಾರಂಭದಲ್ಲಿ ಮಾತನಾಡಿ, ಟೈಗರ್ಸ್ ಅನ್ ಲಿಮಿಟೆಡ್ ವೈಲ್ಡ್ ಲೈಫ್ ಸೊಸೈಟಿ ವನ್ಯ ಜೀವಿಗಳ ಸಂರಕ್ಷಣೆಗೆ ಮುಂದಾಗಿರುವುದು ಶ್ಲಾಘನೀಯ ಎಂದರು. ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತವಾಗಿ ಸೈಕಲ್ ವಿತರಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.