ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ: 50 ಕುರಿಗಳ ಸಾವು

Rashmi Kasaragodu
Updated On : 24 Jan 2014, 2:26 am

ಚಿಕ್ಕಬಳ್ಳಾಪುರ: ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ 6 ಜನರು ತೀವ್ರವಾಗಿ ಗಾಯಗೊಂಡು, ವಾಹನದಲ್ಲಿದ್ದ 50 ಕುರಿಗಳು ಸ್ಥಳದಲ್ಲಿಯೇ ಮೃತಪಟ್ಟಿವೆ. ಆಂಧ್ರ ಪ್ರದೇಶದಿಂದ ಕುರಿಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಟೆಂಪೋ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್ ಬಳಿ ರಿಪೇರಿಯ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಇದರಿಂದ ಚಾಲಕ ಸೇರಿದಂತೆ 6 ಮಂದಿ ತೀವ್ರ ಗಾಯಗೊಂಡಿದ್ದು ತಕ್ಷಣ ಸ್ಥಳೀಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ನಂತರ ಬೆಂಗಳೂರಿನ ಆಸ್ಪತ್ರೆಗೆ ಗಾಯಾಳುಗಳನ್ನು ಕಳುಹಿಸಲಾಗಿದೆ. ಇದೇ ಸಂದರ್ಭದಲ್ಲಿ ವಾಹನದಲ್ಲಿದ್ದ ಸುಮಾರು 50 ಕ್ಕೂ ಹೆಚ್ಚು ಕುರಿಗಳು ಅಪಘಾತದಿಂದ ಸಾವನ್ನಪ್ಪಿದ್ದು ಅನೇಕ ಕುರಿಗಳು ಗಾಯಗೊಂಡಿವೆ. ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೆಮಿಸ್ಟರ್ ವಿರೋಧಿಸಿ ಪ್ರತಿಭಟನೆ

ಬಂಗಾರಪೇಟೆ: ಐಟಿಐ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪದ್ಧತಿ ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ರೈತ ವಿದ್ಯಾರ್ಥಿ ಒಕ್ಕೂಟ ಹಾಗೂ ರಾಷ್ಟ್ರೀಯ ಯುವ ವಿದ್ಯಾರ್ಥಿ ಒಕ್ಕೂಟದವತಿಯಿಂದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಮಾಡಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ನಂತರ ತಹಸೀಲ್ದಾರ್ ಕಚೇರಿಗೆ ಬಂದು ಸೆಮಿಸ್ಟರ್ ಪದ್ಧತಿ ಹಾಗೂ ಕ್ಯಾರಿ ಓವರ್ ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಿದರು. ಸಂಘಟನೆಯ ರಾಜ್ಯ ಸಂಚಾಲಕ ಹೂವಳ್ಳಿ ನಾಗರಾಜ್, ಅಧ್ಯಕ್ಷ ಪ್ರಮೀನ್, ರಾಜ್, ಕಿರಣ್ಕುಮಾರ್,ಪ್ರದೀಪ್, ಮುರಳಿ, ಹುಣಸನಹಳ್ಳಿ ವೆಂಕಟೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement