ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವಿದ್ಯುತ್ ಸ್ಪರ್ಶ; ಒಬ್ಬರ ಸಾವು

Rashmi Kasaragodu
Updated On : 24 Jan 2014, 2:25 am

ಬಾಗೇಪಲ್ಲಿ: ವಿದ್ಯುತ್ ಸ್ಪರ್ಶದಿಂದ ಒಬ್ಬ ಸ್ಥಳದಲ್ಲೇ ಮೃತಪಟ್ಟು ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಯರ್ರಕಾಲುವೆ ಪಕ್ಕದಲ್ಲಿ ನಡೆದಿದೆ.
ಗೌರಿಬಿದನೂರು ತಾಲೂಕಿನ ದಂಡಿಗಾನಹಳ್ಳಿ ಗ್ರಾಮದ ಗಂಗರಾಜು(33) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ.
ಪಟ್ಟಣದ 23ನೇ ವಾರ್ಡಿನ ಕಾವೇರಿ ವಸತಿ ಶಾಲೆಗೆ ಹೋಗುವ ರಸ್ತೆಯ ಮಧ್ಯೆ ಭಾಗದಲ್ಲಿಯೇ ಇದ್ದ 11 ಕೆ.ವಿ ಲೈನ್ ಕಂಬಗಳನ್ನು ತೆರವುಗೊಳಿಸಿ ಹೊಸ ಕಂಬಗಳನ್ನು ಹಾಕುವ ಕೆಲಸಕ್ಕೆ ವಿದ್ಯುತ್ ಗುತ್ತಿಗೆದಾರರು  ಬೆಸ್ಕಾಂ ಇಲಾಖೆಯಿಂದ ಯಾವುದೇ ಅನುಮತಿ ಪಡೆಯದೆ ಕಾಮಗಾರಿ ನಡೆಸುತ್ತಿದ್ದರು ಎನ್ನಲಾಗಿದೆ. ಕಂಬವನ್ನು ಹಾಕುವ ಸಮಯದಲ್ಲಿ ಕಾರ್ಮಿಕರ ಹತೋಟಿ ತಪ್ಪಿ 11ಕೆವಿ ವಿದ್ಯುತ್ ಹರಿಯುತ್ತಿದ್ದ ವಿದ್ಯುತ್ ತಂತಿಗಳ ಕಡೆಗೆ ಉರುಳಿದ ಪರಿಣಾಮ ಹೊಸದಾಗಿ ಹಾಕುತ್ತಿದ್ದ ಕಂಬಕ್ಕೆ ವಿದ್ಯುತ್ ಹರಿದು ಗಂಗರಾಜು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈತನನ್ನು ರಕ್ಷಣಿಸಲು ಹೋದ ರವಿ ಮತ್ತು ಶಿವ ಶಂಕರ ಎಂಬವರಿಗೂ ವಿದ್ಯುತ್ ಸ್ಪರ್ಶದಿಂದ ತೀವ್ರ ಗಾಯಗಳಾಗಿವೆ. ರವಿಯನ್ನು ಬೆಂಗಳೂರಿನ ಆಸ್ಪತ್ರೆಗೆ ಮತ್ತು ಶಿವ ಶಂಕರ್ರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಗಿದೆ.
ಉಪ ನಿರೀಕ್ಷಕ ವಿ. ಮುನಿರೆಡ್ಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಈ ಸಂಬಂಧ ಬೆಸ್ಕಾಂ ಇಲಾಖೆಯಲ್ಲಿ ಕಾಮಗಾರಿ ನಡೆಸುವ ಮುನ್ನ ಯಾವುದೇ ಅನುಮತಿಯನ್ನು ಪಡೆಯದೇ ನಿರ್ಲಕ್ಷ್ಯ ತೋರಿರುವ ಗುತ್ತಿಗೆದಾರ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಅಮಾಯಕ ಕಾರ್ಮಿಕರು ಬಲಿಯಾಗಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೊಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಮೃತಪಟ್ಟಿರುವ ಹಾಗೂ ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement