ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ
ಚಿಕ್ಕಬಳ್ಳಾಪುರ: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2014 ಅಂಗವಾಗಿ ನಗರದ ಶಿಡ್ಲಘಟ್ಟ ವೃತ್ತದಲ್ಲಿ ರಸ್ತೆ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಸಂಚಾರಿ ಠಾಣೆ ಪೊಲೀಸರು ಮತ್ತು ಸಂಘ ಸಂಸ್ಥೆಗಳ ಮುಖಂಡರು ಸೇರಿ ದಿನನಿತ್ಯ ಸಂಭವಿಸುವ ಅಪಘಾತಗಳ ಕೆಲವು ದೃಶ್ಯಗಳನ್ನು ಪ್ರಾಯೋಗಿಕವಾಗಿ ಮಾಡಿ ತೋರಿಸಿ ಸಾರ್ವಜನಿಕರ ಗಮನ ಸೆಳೆದರು. ಪಾದಚಾರಿಗೆ ರಕ್ತ ಬಂದು ಅ್ಯಂಬುಲೆನ್ಸ್ ಮುಖಾಂತರ ಆಸ್ಪತ್ರೆಗೆ ಸಾಗಿಸುವುದು ಸೇರಿದಂತೆ ವಿವಿಧ ರೀತಿಯ ದೃಶ್ಯಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಸಾರ್ವಜನಿಕರು ಸಂಚಾರಿ ನಿಯಮ ಪಾಲಿಸುವುದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ. ವಾಹನ ಸವಾರರು ತೋರುವ ಸಣ್ಣ ನಿರ್ಲಕ್ಷ್ಯಕ್ಕೂ ಅನೇಕರು ಬಲಿಯಾಗುವುದು ಮತ್ತು ಆರ್ಥಿಕ ನಷ್ಟ ಸಂಭವಿಸುವುದನ್ನು ಕಾಣಬೇಕಾಗುತ್ತದೆ ಎಂದರು.