ಜಿಲ್ಲೆಗೆ ಬಜೆಟ್ನಲ್ಲಿ ವಿಶೇಷ ಪ್ಯಾಕೇಜ್ ನೀಡಿ
ಕೋಲಾರ: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2014ರ ಬಜೆಟ್ನಲ್ಲಿ ಬರಪೀಡಿತ ಕೋಲಾರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಮಾಜ ಸೇನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕ ದಲಿತ ಸಮಾಜ ಸೇನೆಯ ಸಂಸ್ಥಾಪಕ ಅಧ್ಯಕ್ಷ ಸೂಲಿಕುಂಟೆ ಆನಂದ್ ಮಾತನಾಡಿದರು. ಸರ್ಕಾರ ಬಂಗಾರಪೇಟೆ, ಮೂಲಬಾಗಿಲು, ಶ್ರೀನಿವಾಸಪುರಗಳನ್ನು ಬರಪೀಡಿತ ಎಂದು ಘೋಷಿಸಿದ್ದು ಯಾವುದೇ ರೀತಿಯ ಪರಿಹಾರವನ್ನು ನೀಡಿರುವುದಿಲ್ಲ ಎಂದ ಅವರು ಕೋಲಾರ ಮತ್ತು ಮಾಲೂರು ತಾಲೂಕುಗಳನ್ನು ಬರಪೀಡಿತ ಜಿಲ್ಲೆಗಳ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿದರು. ಜಿಲ್ಲೆಯ ಐದು ತಾಲೂಕುಗಳಲ್ಲಿ ಪಂಚಾಯಿತಿ ಮಟ್ಟದಲ್ಲಿ ಗೋಶಾಲೆಗಳನ್ನು ತೆರೆಯಬೇಕು, ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಕೈಗಾರಿಕಾ ಸಂಸ್ಥೆಗಳನ್ನು ತೆರೆಯಬೇಕು ಎಂದರು.