ಕಾಮಗಾರಿ ಗುಣಮಟ್ಟ ಪರಿಶೀಲನೆ
ಮಾಲೂರು: ಪಟ್ಟಣದಲ್ಲಿ 5 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಮಂಜುನಾಥ್ಗೌಡ ಕಾಮಗಾರಿಯ ಗುಣಮಟ್ಟ ಪರೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಸಾರ್ವಜನಿಕರು ಸರ್ಕಾರಕ್ಕೆ ನೀಡುವ ತೆರಿಗೆ ಹಣದಿಂದ ಕಾಮಗಾರಿಗಳು, ಯೋಜನೆಗಳನ್ನು ಅನುಷ್ಠಾನಗೊಳ್ಳುತ್ತಿದ್ದು, ಕಾಮಗಾರಿಗಳು ಗುಣಮಟ್ಟದಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು. ಕಾಮಗಾರಿ ಗುಣಮಟ್ಟ ಕಳಪೆಯಾದಲ್ಲಿ ತಕ್ಷಣ ಕಾಮಗಾರಿ ನಿಲ್ಲಿಸುವ ಜತೆಯಲ್ಲಿ ವಿಷಯವನ್ನು ನನಗೆ ತಿಳಿಸಿ ಎಂದರು.
ಪುರಸಭೆ ಮುಖ್ಯಾಧಿಕಾರಿ ರೇಣುಕಾ, ವಾರ್ಡ್ ಸದಸ್ಯ ರಾಮಮೂರ್ತಿ, ಜಾಕೀರ್ಖಾನ್, ಅಭಿಯಂತರ ಮಂಜುನಾಥ್, ಡಾ.ನಾಗರಾಜ್, ಪುರಸಭೆ ಮಾಜಿ ಸದಸ್ಯ ಪ್ರದೀಪ್ ರೆಡ್ಡಿ, ಬಚ್ಚೇಗೌಡ, ಮಾ.ಕೃ.ಸುರೇಶ್,ಪ್ರದೀಪ್ ಇದ್ದರು.