ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನಿವೇಶನ ವಿವಾದ: ವ್ಯಕ್ತಿ ಮೇಲೆ ಹಲ್ಲೆ

Rashmi Kasaragodu
Updated On : 28 Jan 2014, 1:25 am

ಚಿಂತಾಮಣಿ: ಬುರುಡಗುಂಟೆ ಗ್ರಾಮದಲ್ಲಿ ನಿವೇಶನ ವಿವಾದಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದೆ.
ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬುರುಡಗುಂಟೆ ಗ್ರಾಮದಲ್ಲಿ ಭಾನುವಾರ ಸಂಜೆ ನಾರಾಯಣಪ್ಪ ಎಂಬವರ ಮನೆ ಪಕ್ಕದಲ್ಲಿರುವ ನಿವೇಶನವೊಂದಕ್ಕೆ ಸಂಬಂಧಿಸಿದಂತೆ ಶಿವಪ್ಪ ಎಂಬವರು ಕ್ಷುಲ್ಲಕ ಕಾರಣಕ್ಕೆ ಗುಂಪು ಕಟ್ಟಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮಾತಿಗೆ ಮಾತು ಬೆಳೆದು ನಾರಾಯಣಪ್ಪನ ಮೇಲೆ ಶಿವಪ್ಪ, ಪತ್ನಿ ವೆಂಕಟಲಕ್ಷ್ಮಮ್ಮ, ಮಕ್ಕಳಾದ ವಸಂತ್, ಗಿರೀಶ್ ಎಂಬವರು ಕಲ್ಲು ಮತ್ತು ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ನಾರಾಯಣಪ್ಪ ತಲೆಗೆ ಪೆಟ್ಟು ಬಿದ್ದು ಪ್ರಜ್ಞಾಹೀನರಾದ ತಕ್ಷಣ ಚಿಕಿತ್ಸೆಗಾಗಿ ಬೆಂಗಳೂರು ನಿಮ್ಹಾನ್ಸ್ಗೆ ದಾಖಲಿಸಲಾಗಿದೆ.
ಕೆಂಚಾರ್ಲಹಳ್ಳಿ ಪೊಲೀಸರು ಹಲ್ಲೆಗೊಳಗಾದ ನಾರಾಯಣಪ್ಪ ದೂರು ನೀಡಿದ್ದರೂ ಸ್ವೀಕರಿಸಿಲ್ಲ ಎಂದು ಆರೋಪಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement