ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಭ್ರಷ್ಟಾಚಾರ ಮುಕ್ತ ತಾಲೂಕು ಮಾಡಲು ಶ್ರಮ: ಶಾಸಕ

Rashmi Kasaragodu
Updated On : 28 Jan 2014, 1:25 am

ಬಾಗೇಪಲ್ಲಿ: ಬಾಗೇಪಲ್ಲಿಯನ್ನು ಭ್ರಷ್ಟಾಚಾರ ಮುಕ್ತ ತಾಲೂಕನ್ನಾಗಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಭರವಸೆ ನೀಡಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಏರ್ಪಡಿಸಿದ್ದ 65 ನೇ ಗಣರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಕಚೇರಿಗಳಲ್ಲಿ ಬಡವರಿಂದ ವಿವಿಧ ರೀತಿಯ ಕೆಲಸಗಳನ್ನು ಮಾಡಿಕೊಡಲು ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿವೆ. ನಾನು ಶಾಸಕನಾಗಿ ಆಯ್ಕೆಯಾದ ದಿನದಿಂದಲೇ ಪತ್ರಿ ಸಭೆ-ಸಮಾರಂಭಗಳಲ್ಲಿ ಯಾವುದೇ ಕಾರಣಕ್ಕೂ ಅಧಿಕಾರಿಗಳಿಗೆ ಲಂಚ ನೀಡಬಾರದು, ಅಧಿಕಾರಿಗಳು ಲಂಚ ಕೇಳಿದರೆ ನನ್ನ ಗಮನಕ್ಕೆ ತನ್ನಿ, ಅಂತಹ ಅಧಿಕಾರಿಗಳ ವಿರುದ್ಧ ಕ್ರಮಕ್ಕಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳುತ್ತಲೇ ಇದ್ದೇನೆ. ಆದರೂ ಇದುವರೆಗೂ ಯಾರೊಬ್ಬರೂ ದೂರು ನೀಡಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ಧ್ವಜಾರೋಹಣವನ್ನು ತಹಸೀಲ್ದಾರ್ ಎಂ.ಎ. ಪದ್ಮ ನೆರವೇರಿಸಿದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಹಾಗೂ ಪಥ ಸಂಚಲನ ಕಾರ್ಯಕ್ರಮ ನಡೆಯಿತು. ಜಿಪಂ ಸದಸ್ಯರಾದ ಬಿ. ಸಾವಿತ್ರಮ್ಮ,ಅಮರಾವತಿ, ನಾರಾಯಣಮ್ಮ, ತಾಪಂ ಅಧ್ಯಕ್ಷೆ ಮುನಿರತ್ನಮ್ಮ, ಇಒ ಶ್ರೀನಿವಾಸ್, ಜಿಪಂ ಇಲಾಖೆಯ ಎಇಇ ಪಿ.ವಿ. ನಾಗಪ್ಪ, ಬಿಇಒ ಕೆ. ವೆಂಕಟೇಶ್, ಪುರಸಭೆ ಮುಖ್ಯಾಧಿಕಾರಿ ಆರ್. ಶ್ರೀಕಾಂತ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement