ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಹೆಣ್ಣು ಮಕ್ಕಳಿಗೆ ಪೋಷಕರು ನೆರವು ನೀಡಿ

Rashmi Kasaragodu
Updated On : 28 Jan 2014, 1:17 am

ಕ.ಪ್ರ.ವಾರ್ತೆ    ಗುಡಿಬಂಡೆ    ಜ. 27
ಸರ್ಕಾರ ಹೆಣ್ಣುಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು, ಪೋಷಕರು ಅವರ ಪ್ರಗತಿಗೆ ನೆರವಾಗಬೇಕೆಂದು ಕಸ್ತೂರ ಬಾ ಗಾಂಧಿ ಬಾಲಿಕಾ ವಿದ್ಯಾಲಯದ ಮುಖ್ಯ ಶಿಕ್ಷಕಿ ಜಿ.ವಿ.ಗಂಗಾರತ್ನಮ್ಮ ಕರೆ ನೀಡಿದರು.
ತಾಲೂಕಿನ ಜೆ.ಪಿ.ನಗರದ ಕಸ್ತೂರ ಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘ ಹಾಗೂ ಹೊಯ್ಸಳ ಯುವಜನ ಸೇವಾ ಸಂಘಗಳ ಸಹಯೋಗದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಭಾನುವಾರ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದರೊಂದಿಗೆ ರಾಷ್ಟ್ರೀಯ ಭಾವೈಕ್ಯತಾ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ನಾಗರತ್ನಮ್ಮ ಮಾತನಾಡಿದರು.
ದೇಶದಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಮತ್ತು ಶೋಷಣೆ ಪ್ರಕರಣಗಳು ಹೆಚ್ಚುತ್ತಿವೆ. ಹೆಣ್ಣು ಮಕ್ಕಳ ಮಾರಾಟ, ಲೈಂಗಿಕ ಕಿರುಕುಳ, ಭಿಕ್ಷಾಟನೆ, ಶಿಕ್ಷಣದಿಂದ ವಂಚಿಸುವ ಕೆಲಸಗಳು, ಬಾಲಕಾರ್ಮಿಕ, ಬಾಲ್ಯ ವಿವಾಹ ಮೊದಲಾದ ಅನಿಷ್ಟ ಪದ್ಧತಿಗಳಿಂದ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂದು ಖೇದ ವ್ಯಕ್ತಪಡಿಸಿದರು.
 ಇಂಥ ದುಷ್ಟ ಶಕ್ತಿಗಳಿಗೆ ಬುದ್ಧಿ ಕಲಿಸಲು ಸಾಕಷ್ಟು ಕಾನೂನುಗಳೂ ಜಾರಿಯಲ್ಲಿವೆ. ಅವುಗಳನ್ನು ಸೂಕ್ತವಾಗಿ ಬಳಸಿಕೊಂಡು ಮಕ್ಕಳನ್ನು ರಕ್ಷಿಸುವ ಕೆಲಸವಾಗಬೇಕು. ಜತೆಗೆ ಪೋಷಕರು ಹಾಗೂ ಶಿಕ್ಷಕರು ರಾಷ್ಟ್ರ ನಾಯಕರಾದ ಭಗತ್ ಸಿಂಗ್, ಸುಭಾಷ್ ಚಂದ್ರಬೋಸ್, ಡಾ. ಅಂಬೇಡ್ಕರ್, ಗಾಂಧೀಜಿ, ಲಾಲ್ ಬಹುದ್ದೂರ್ ಶಾಸ್ತ್ರಿ, ಸರ್ದಾರ್ ವಲ್ಲಭ ಬಾಯ್ ಪಟೇಲ್, ಸ್ವಾಮಿ ವಿವೇಕಾನಂದರ ವಿಚಾರಧಾರೆಗಳನ್ನು ಮಕ್ಕಳಿಗೆ ತಿಳಿಸಿ ಅವರಲ್ಲಿ ರಾಷ್ಟ್ರ ಪ್ರೇಮವನ್ನು ತುಂಬಿಸಬೇಕೆಂದರು.
ವಿಜೇತರಿಗೆ ಬಹುಮಾನ ವಿತರಣೆ: ಕಾರ್ಯಕ್ರಮದಲ್ಲಿ ಪುಟಾಣಿಗಳು ದೇಶಭಕ್ತಿ ಗೀತೆಗಳನ್ನು ಹಾಡಿ ರಾಷ್ಟ್ರೀಯ ಭಾವೈಕ್ಯತಾ ಗೀತೆಗಳಿಗೆ ನೃತ್ಯ ರೂಪಕಗಳನ್ನು ಪ್ರದರ್ಶಿಸಿದರು. ಆಯೋಜಕರು ಪ್ರಬಂಧ, ಭಾಷಣ, ಚಿತ್ರಕಲೆ, ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಗಳಲ್ಲಿ ವಿಜೇತರಾದ ಪುಟಾಣಿಗಳಿಗೆ ಕನ್ನಡ ಇಂಗ್ಲೀಷ್ ನಿಗಂಟುಗಳನ್ನು ಬಹುಮಾನವಾಗಿ ವಿತರಿಸಿದರು.
ಜಿಲ್ಲಾ ಪರಿಸರ ಸಂರಕ್ಷಣಾ ವೇದಿಕೆಯ ಸಂಚಾಲಕ ನವೀನ್, ಹೊಯ್ಸಳ ಯುವಜನ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ವೆಂಕಟೇಶ್ ಬಾಬು, ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘದ ಯೋಜನಾ ಅಧ್ಯಕ್ಷ ಜಿ.ವಿ ವಿಶ್ವನಾಥ್, ನಿರ್ದೇಸಕ ಎಸ್.ಮಂಜುನಾಥ್, ಜನವಾದಿ ಮಹಿಳಾ ಸಂಘದ ಜಿಲ್ಲಾ ಸಹಕಾರ್ಯದರ್ಶಿ ಎಂ.ವೀಣಾ, ಕಸ್ತೂರ ಬಾ ಗಾಂಧಿ ಬಾಲಿಕಾ ವಿದ್ಯಾಲಯದ ಎಸ್ಡಿಎಂಸಿ ಅಧ್ಯಕ್ಷೆ ರಾಮಲಕ್ಷ್ಮಮ್ಮ, ಸಹ ಶಿಕ್ಷಕರಾದ ಪಿ.ಶಶಿಕಲಾ, ಡಿ.ಕೆ.ರೇವತಿ, ಸುಕನ್ಯಾ, ದೈಹಿಕ ಶಿಕ್ಷಕ ಕೆ.ವಿ.ಗೋವಿಂದಪ್ಪ, ಗೌರಿಬಿದನೂರಿನ ಶಾಂತ ರೂರಲ್ ಡೆವಲಪ್ಮೆಂಟ್ ಸೊಸೈಟಿಯ ಅಧ್ಯಕ್ಷೆ ಮಾಲತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement