ಬೆಸ್ಕಾಂನಿಂದ ವಿದ್ಯುತ್ ಸುರಕ್ಷತಾ ಸಪ್ತಾಹ
ಶಿಡ್ಲಘಟ್ಟ: ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಬೆಸ್ಕಾಂನಿಂದ ವಿದ್ಯುತ್ ಸುರಕ್ಷತಾ ಸಪ್ತಾಹ ಹಮ್ಮಿಕೊಳ್ಳಲಾಗಿತ್ತು.
ವಿದ್ಯುತ್ ಸುರಕ್ಷತಾ ಸಪ್ತಾಹ ಉದ್ಘಾಟಿಸಿದ ಎಕ್ಸಿಕ್ಯೂಟಿವ್ ಎಂಜಿನಿಯರ್ ಸುಭಾಷ್ ಚಂದ್ರ ಮಾತನಾಡಿ, ಬೇಸಿಗೆ ಬರುತ್ತಿದು ವಿದ್ಯುತ್ ಕೊರತೆ ಹೆಚ್ಚಾಗಿದ್ದು, ವಿದ್ಯುತ್ ಬೇರೆ ಕಡೆಯಿಂದ ಖರೀದಿ ಮಾಡಿ ಕೊಡಬೇಕಾದ ಪರಿಸ್ಥಿತಿಯಲ್ಲಿದ್ದು, ಸಾರ್ವಜನಿಕರು ವಿದ್ಯುತ್ ಮಿತವಾಗಿ ಬಳಸಬೇಕೆಂದು ತಿಳಿಸಿದರು.
ಶಾಲಾ ಮಕ್ಕಳಿಂದ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು, ಕಾರ್ಯಕ್ರಮದಲ್ಲಿ ಶಾಲೆ ಮಕ್ಕಳಿಗೆ ವಿದ್ಯುತ್ ಬಗ್ಗೆ ಚರ್ಚೆ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದ್ದು ಗೆದ್ದವರಿಗೆ ಬಹುಮಾನ ನೀಡಲಾಯಿತು. ಎಡಬ್ಯುಡಿ ಹರಿಬಾಬು, ಎಒ ಸೋಮಶಂಕರ್, ವೇಣುಗೋಪಾಲ್, ವೆಂಕಾನಾಯಕ್, ಶಿವಶಂಕರ್ ಅನ್ಸರ್ ಪಾಷಾ, ಬೆಸ್ಕಾಂ ಸಿಬ್ಬಂದಿ ಇದ್ದರು.