ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಲಾಠಿ ಪ್ರಹಾರ ಖಂಡಿಸಿ ಪ್ರತಿಭಟನೆ

Mainashree
Updated On : 28 Jan 2014, 11:08 am

ಕೋಲಾರ: ಬೆಂಗಳೂರಿನಲ್ಲಿ ಸೋಮವಾರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ಅತಿಥಿ ಉಪನ್ಯಾಸಕರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿ ಹೋರಾಟ ಹತ್ತಿಕ್ಕಲು ಸರ್ಕಾರ ಹುನ್ನಾರ ನಡೆಸಿದೆ ಎಂದು ಆರೋಪಿಸಿ ನಗರದ ವಿದ್ಯಾರ್ಥಿಗಳು ಮಂಗಳವಾರ ತರಗತಿ ಬಹಿಷ್ಕರಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಭೋದನೆ ಮಾಡುತ್ತಿರುವ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಮಾವೇಶಗಳು, ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಹಲವು ಮನವಿ ಸಲ್ಲಿಸಿದ್ದರೂ ರಾಜ್ಯ ಸರ್ಕ್ಕಾರ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದೆ. ಇದರಿಂದ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಬೇಕೆಂದು ಒತ್ತಾಯಿಸಿ ಅನಿರ್ಧಿಷ್ಠಾವಧಿ ಧರಣಿ ನಡೆಸಲು ತೀರ್ಮಾನಿಸಲಾಗಿತ್ತು. ಈ ಸಂದರ್ಭದಲ್ಲಿ ಪೊಲೀಸರು ಮಹಿಳೆಯರು ಸೇರಿದಂತೆ ಅನೇಕ ಅತಿಥಿ ಉಪನ್ಯಾಸಕರ ಮೇಲೆ ಲಾಠಿ ಪ್ರಹಾರ ಮಾಡಿದ್ದಾರೆಂದು ದೂರಿದರು.
ಇದರಿಂದ ಹಲವಾರು ಮಂದಿಗೆ ಗಾಯಗಳಾಗಿದೆ. ಅಲ್ಲದೇ 1 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರನ್ನು ಬಂಧಿಸಿ, ಉಳಿದ ಅತಿಥಿ ಉಪನ್ಯಾಸಕರನ್ನು ತಮ್ಮ ತಮ್ಮ ಊರುಗಳಿಗೆ ತೆರಳುವಂತೆ ಬೆದರಿಕೆ ಹಾಕಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಅತಿಥಿ ಉಪನ್ಯಾಸಕರ ಮೇಲೆ ಹೂಡಿರುವ ಸುಳ್ಳು ಮೊಕದ್ದಮೆ ವಾಪಸು ಪಡೆಯಬೇಕು, ಪ್ರತಿಭಟನಾಕಾರರ ಮೇಲೆ ಅನಾವಶ್ಯಕವಾಗಿ ಲಾಠಿ ಚಾರ್ಜ್ ಮಾಡಿದ ಪೊಲೀಸರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು, ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯನ್ನು ಕಾಯಂ ಗೂಳಿಸಬೇಕು, ಯುಜಿಸಿ ನಿಯಮದಂತೆ ತಿಂಗಳಿಗೆ 25 ಸಾವಿರ ರು. ವೇತನ ನಿಗದಿಗೊಳಿಸಬೇಕು ಮತ್ತಿತರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮೀನಾರಾಯಣ, ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ ಅಂಬರೀಷ್, ಜಿಲ್ಲಾಧ್ಯಕ್ಷ ವಾಸುದೇವರೆಡ್ಡಿ, ಕಾರ್ಯದರ್ಶಿ ಮಾರ್ಕಂಡಯ್ಯ, ಅಮರೇಶ್, ಮುಸ್ತಾಪ, ಡಿವೈಎಫ್‌ಐ ಜಿಲ್ಲಾ ಅಧ್ಯಕ್ಷ ಬಿ.ವಿ. ಸಂಪಂಗಿ, ಜಿಲ್ಲಾ ಕಾರ್ಯದರ್ಶಿ ವಿಜಯಕೃಷ್ಣ, ಚಲಪತಿ, ಎ.ವಿ. ರಮೇಶ್, ರಾಮಾಂಜಿ, ಸುಬ್ರಮಣಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement