ದಲಿತರ ಮೇಲೆ ದೌರ್ಜನ್ಯ ತಡೆಗೆ ಆಗ್ರಹಿಸಿ ಪ್ರತಿಭಟನೆ
ಬಂಗಾರಪೇಟೆ: ಜಿಲಾದ್ಯಂತ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದ್ದು ಕೂಡಲೆ ಜಿಲ್ಲಾಡಳಿತ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ದಲಿತ ಸಮಾಜ ಸೇನೆ ಮುಖಂಡರು ಪಟ್ಟಣದ ಅಂಬೇಡ್ಕರ್ ಪ್ರತಿಮೆ ಮುಂದೆ ಧರಣಿ ಮಾಡಿದರು. ಕೂಡಲೆ ಸರ್ಕಾರ ದೌರ್ಜನ್ಯಕ್ಕೊಳಗಾದ ದಲಿತ ಕುಟುಂಬಗಳಿಗೆ ರಕ್ಷಣೆ ನೀಡಿ ಮುಂದೆ ಇಂತಹ ಕೃತ್ಯ ನಡೆಯದಂತೆ ಎಚ್ಚರಿಕೆ ನೀಡಬೇಕೇಕು ಎಂದು ಎಚ್ಚರಿಕೆ ನೀಡಿದರು. ಸಂಘಟನೆ ಜಿಲ್ಲಾಧ್ಯಕ್ಷ ಸೂಲಿಕುಂಟೆ ಆನಂದ್, ತಾಲೂಕು ಅಧ್ಯಕ್ಷ ಹುಣಸನಹಳ್ಳಿ ರಮೇಶ್, ಎ.ಎಲ್.ಎನ್. ಸ್ವಾಮಿ, ದೇವಗಾನಹಳ್ಳಿ ಯತೀಶ್, ಗಜಲಕ್ಷ್ಮಿ ಇದ್ದರು.