ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬಾಲ್ಯ ವಿವಾಹ ನಿಷೇಧ ಕುರಿತು ಅರಿವು

Rashmi Kasaragodu
Updated On : 31 Jan 2014, 1:46 am

ಕೆಜಿಎಫ್: ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರ ಮತ್ತು ಮಕ್ಕಳ ಮಾರಾಟ ತಡೆ ಕುರಿತು ಜಾಗೃತಿ ಹಾಗೂ ಬಾಲ್ಯ ವಿವಾಹ ಪದ್ಧತಿ ನಿಷೇಧ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ನಗರಸಭೆ ಮೈದಾನದಲ್ಲಿ ಏರ್ಪಡಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಜಿಎಫ್ ಶಾಸಕಿ ವೈ. ರಾಮಕ್ಕ, ಮಹಿಳೆಯರ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಕಾನೂನಿನ ಅರಿವು ಮೂಡಿಸುವುದು ಅವಶಕವಾಗಿದೆ ಎಂದರು.
ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಾಟದ ಬಗ್ಗೆ ಎಚ್ಚರವಹಿಸಬೇಕು. ಇತ್ತೀಚಿನ ದಿನಗಳಲ್ಲಿ ತಮ್ಮ ಕುಟುಂಬವನ್ನು ಪೋಷಿಸಲು ಮಹಿಳೆಯರು ಉದ್ಯೋಗಕ್ಕಾಗಿ ವಿವಿಧ ಸಂಸ್ಥೆಗಳಲ್ಲಿ ನೀಡುವ ತರಬೇತಿಗಳಿಗಾಗಿ ಇತರೆ ರಾಜ್ಯಗಳಿಗೆ, ಜಿಲ್ಲೆಗಳಿಗೆ ಅಲೆಯಬೇಕಾಗಿರುವ ಪರಿಸ್ಥಿತಿಯಲ್ಲಿ ಮಹಿಳೆಯರ ಮತ್ತು ಮಕ್ಕಳ ಮೇಲೆ ದೌರ್ಜನ್ಯಗಳು, ಸುಲಿಗೆ, ಮಾರಾಟ ಮತ್ತು ಸಾಗಾಟ ಪ್ರಕರಣಗಳು ನಡೆಯುತ್ತಿದೆ ಇದನ್ನು ತಡೆಗಟ್ಟಲು ಅವರಿಗೆ ಇಂತಹ ಅರಿವು ಮೂಡಿಸುವ ಕಾರ್ಯಕ್ರಮಗಳು ಹೆಚ್ಚಿನ ಸಹಕಾರಿಯಾಗಲಿದೆ ಎಂದರು.
ನಗರಸಭೆ ಮೈದಾನದಿಂದ ಜಾಗೃತಿ ಜಾಥಾಗೆ ಚಾಲನೆ ನೀಡಿದ ಶಾಸಕಿ ವೈ. ರಾಮಕ್ಕ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.
ಮಾಜಿ ಶಾಸಕ ವೈ. ಸಂಪಂಗಿ, ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಶಂಕರಮೂರ್ತಿ, ನಗರಸಭೆ ಪೌರಾಯುಕ್ತ ವಿ. ಬಾಲಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ನಗರಸಭಾ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement