ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮುಖ್ಯಮಂತ್ರಿ ಮಾಧ್ಯಮ ಸಮನ್ವಯಾಧಿಕಾರಿ ಪ್ರಭಾಕರ್ಗೆ ಅಭಿನಂದನೆ

Rashmi Kasaragodu
Updated On : 31 Jan 2014, 1:43 am

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಮನ್ವಯ ಅಧಿಕಾರಿಯಾಗಿ ನೇಮಕಗೊಂಡಿರುವ ಪತ್ರಕರ್ತಕೆ.ವಿ. ಪ್ರಭಾಕರ್ ಅವರನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ. ಗೋಪಿನಾಥ್ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಎಸ್. ಗಣೇಶ್ ಹಾಗೂ ಪದಾಧಿಕಾರಿಗಳು ಅಭಿನಂದಿಸಿದ್ದಾರೆ. ಜಿಲ್ಲೆಯವರಾದ ಕೆ.ವಿ. ಪ್ರಭಾಕರ್ ಅವರಿಗೆ ಈ ಅವಕಾಶ ದೊರೆತಿರುವುದಕ್ಕಾಗಿ ಸಂತಸ ವ್ಯಕ್ತಪಡಿಸಲಾಗಿದ್ದು ಅವರ ಅವಧಿಯಲ್ಲಿ ಪತ್ರಕರ್ತರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳು ಹೆಚ್ಚು ಮೂಡಿಬರಲಿ ಎಂದು ಶುಭ ಹಾರೈಸಿದ್ದಾರೆ.
ಬಿಎಸ್ಸಿ ಪದವಿಯಲ್ಲಿ ವಿವಿಗೆ ಪ್ರಥಮ
ಚಿಂತಾಮಣಿ: ಬಿಎಸ್ಸಿ ಪದವಿಯಲ್ಲಿ ಹೆಚ್ಚು ಅಂಕ ಗಳಿಸುವ ಮೂಲಕ ವಿಶ್ವ ವಿದ್ಯಾಲಯದಲ್ಲಿ ಪ್ರಥಮ ರ್ಯಾಂಕ್ ಪಡೆದಿರುವ ಎನ್. ಚೈತ್ರ ಕಾಲೇಜಿಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿದ್ದಾರೆಂದು ಸರ್ಕಾರಿ ಮಹಿಳಾ ಕಾಲೇಜಿನ ಫ್ರೊ. ಕೃಷ್ಣಮೂರ್ತಿ ತಿಳಿಸಿದ್ದಾರೆ.
ಚಿಂತಾಮಣಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿರುವ ಎನ್. ಚೈತ್ರ ಬೆಂಗಳೂರು ವಿಶ್ವವಿದ್ಯಾಲಯದ ಪ್ರಥಮ, ದ್ವಿತೀಯ ಮತ್ತು ತೃತೀಯ(2010-2013) ಬಿಎಸ್ಸಿ(ಪಿಸಿಎಂ) ಪದವಿ ಪರೀಕ್ಷೆಯಲ್ಲಿ ಒಟ್ಟು 2,400 ಅಂಕಗಳಿಗೆ 2,321 ಅಂಕ ಗಳಿಸಿ ಶೇ.96.71 ಅಂಕಗಳನ್ನು ಪಡೆದು ಬೆಂಗಳೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ಪ್ರಥಮ ರ್ಯಾಂಕನ್ನು ಗಳಿಸಿದ್ದಾರೆ.
ಎನ್. ಚೈತ್ರ ಅವರು ಚಿಕ್ಕಬಳ್ಳಾಪುರ ತಾಲೂಕಿನ ಹೊಸಹುಡ್ಯ ಹೋಬಳಿಗೆ ಸೇರಿದ ಹೆಣ್ಣೂರು ಕದಿರೇನಹಳ್ಳಿಯ ವ್ಯವಸಾಯ ಕುಟುಂಬದಲ್ಲಿ ಜನಿಸಿದವಳಾಗಿದ್ದಾಳೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement