ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅಕ್ಷರ ದಾಸೋಹ ನೌಕರರ ಪ್ರತಿಭಟನೆ

Rashmi Kasaragodu
Updated On : 2 Jul 2014, 1:21 am

ಗೌರಿಬಿದನೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ತಾಲೂಕು ಅಧ್ಯಕ್ಷೆ ಜೆ. ನರಸಮ್ಮ ಮಾತನಾಡಿ, ಬಿಸಿಯೂಟ ನೌಕರರನ್ನು ಶಿಕ್ಷಣ ಇಲಾಖೆಯಲ್ಲಿ ಕಾಯಂ ಮಾಡಬೇಕು, ಶಾಲಾ ಸಿಬ್ಬಂದಿ ನೇಮಕಾತಿ ಮಾಡಿ ಆದೇಶ ಹೊರಡಿಸಬೇಕು, ಕನಿಷ್ಠ ಕೂಲಿ ಹೆಚ್ಚಿಸಬೇಕು ಸೇರಿದಂತೆ ಹಲವಾರು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕಾರ್ಯದರ್ಶಿ ನಾಗಮಣಿ ರಾಜಮ್ಮ, ಸಿ.ಸಿ. ಅಶ್ವತ್ಥಪ್ಪ ಸೇರದಂತೆ ನೂರಾರು ಅಕ್ಷರ ದಾಸೋಹ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಹಾಜರಿದ್ದರು. ನಂತರ ಮನವಿಯನ್ನು ತಹಶೀಲ್ದಾರ್ಗೆ ಸಲ್ಲಿಸಿದರು.
ಪಾಲಿಕೆ ಸದಸ್ಯನಿಗೆ ಷೋಕಾಸ್ ನೋಟಿಸ್ ಜಾರಿ
ತುಮಕೂರು: ತುಮಕೂರು ನಗರ ಶಾಸಕ ಡಾ. ರಫೀಕ್ ಅಹಮದ್ ಹಾಗೂ ಪಾಲಿಕೆ ಮೇಯರ್ ಅವರನ್ನು ನಿಂದಿಸಿದ ಆರೋಪದ ಮೇಲೆ ಪಾಲಿಕೆ ಸದಸ್ಯ ಸುಧೀಶ್ವರ್ಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಷಫಿ ಅಹಮದ್ ಷೋಕಾಸ್ ನೊಟೀಸ್ ನೀಡಿದ್ದಾರೆ. ಶಾಸಕರು ಮತ್ತು ಮೇಯರ್ ಅವರು ಅಧಿಕಾರಿಗಳಿಂದ ಹಪ್ತಾ ವಸೂಲಿ ಮಾಡುತ್ತಾರೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಈ ನಡವಳಿಕೆಯನ್ನು ಒಂದು ದುರ್ನಡತೆಯೆಂದು ಪರಿಗಣಿಸಿ ಈ ಷೋಕಾಸ್ ನೊಟೀಸ್ ನೀಡಲಾಗಿದೆ.
ಆಷಾಢ ಗೌರಿಗೆ ಅಲಂಕಾರ
ತಿಪಟೂರು: ಪಟ್ಟಣದ ಭಾವಸಾರ ಕ್ಷತ್ರಿಯ ದೈವ ಮಂಡಳಿ ಮತ್ತು ಯುವಕ ಸಂಘದ ವತಿಯಿಂದ ಆಷಾಢ ಗೌರಿ ಹಬ್ಬದ ಅಂಗವಾಗಿ ಮಂಗಳವಾರ ಆಷಾಢ ಗೌರಿ ವಿಗ್ರಹಕ್ಕೆ ವಿಶೇಷ ಹೂವಿನ ಅಲಂಕಾರ ಮತ್ತು ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಭಾವಸಾರ ಕ್ಷತ್ರಿಯ ಸಮಾಜ ಬಾಂಧವರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯವರ ದರ್ಶನ ಪಡೆದರು.
ಪ್ರತಿಭಾ ಪುರಸ್ಕಾರ 4ಕ್ಕೆ
ತುಮಕೂರು: ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಜಯ ಕರ್ನಾಟಕ ವತಿಯಿಂದ ಜುಲೈ 4 ರಂದು ಬೆಳಗ್ಗೆ 9.30 ಕ್ಕೆ ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಲಿದೆ. ಜಯಕರ್ನಾಟಕ ವಿದ್ಯಾರ್ಥಿ ಘಟಕದ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಜಯಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಘಟಕದ ಅಧ್ಯಕ್ಷ ಉಪಸ್ಥಿತರಿದ್ದಾರೆ.
ನಿವೃತ್ತ ಪೊಲೀಸರ ಸಭೆ ಇಂದು
ತುಮಕೂರು: ನಿವೃತ್ತ ಪೊಲೀಸ್ ಅಧಿಕಾರಿಗಳ ಮಾಸಿಕ ಸಭೆ ಬುಧವಾರ ಬೆಳಗ್ಗೆ 11 ಗಂಟೆಗೆ ಹೊಯ್ಸಳ ಹೊಟೇಲ್ನಲ್ಲಿ ಮಾಲೂರಪ್ಪ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದೆ. ಈ ಸಭೆಗೆ ಬರುವಾಗ ನಿವೃತ್ತ ಪೊಲೀಸ್ ಅಧಿಕಾರಿಗಳು ತಮ್ಮ ಹಾಗೂ ತಮ್ಮ ಕುಟುಂಬದವರು ಉಪಯೋಗಿಸುತ್ತಿರುವ ಔಷಧಿಗಳ ವಿವರಗಳನ್ನು ಒಳಗೊಂಡ ವೈದ್ಯರ ಸಲಹಾ ಚೀಟಿಯನ್ನು ತಂದು ಹಾಜರುಪಡಿಸಬೇಕು. ನಿವೃತ್ತ ಪೊಲೀಸರ ಹಾಗೂ ಕುಟುಂಬ ಪಿಂಚಣಿದಾರರ ಹಾಗೂ ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳ ಅನುಕೂಲಕ್ಕಾಗಿ ರಿಯಾಯತಿ ದರದಲ್ಲಿ ಔಷಧಿಗಳನ್ನು ಖರೀದಿಸಲು ಮಾಲೂರಪ್ಪ ಫೋ. 9620839620 ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement