ಕಾಂಗ್ರೆಸ್ ಸಮಾರಂಭ ನಾಳೆ
ಪಾವಗಡ: ಬಿ.ಎನ್.ಚಂದ್ರಪ್ಪ ಅವರ ಗೆಲವಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ತಾಲೂಕು ಕಾಂಗ್ರೆಸ್ ವತಿಯಿಂದ ಮತದಾರರಿಗೆ ಅಭಿನಂದನಾ ಸಮಾರಂಭವನ್ನು ಜು.3ರಂದು ಮಧ್ಯಾಹ್ನ 12ಗಂಟೆಗೆ ಪಟ್ಟಣದ ಎಸ್ಎಸ್ಕೆ ಬಯಲು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಡಿ. ಸುದೇಶ್ಬಾಬು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಚಿತ್ರದುರ್ಗ ಸಂಸದ ಬಿ.ಎನ್.ಚಂದ್ರಪ್ಪ ಅವರು ಜು.3ರಂದು ಪಟ್ಟಣಕ್ಕೆ ಆಗಮಿಸಲಿದ್ದು ಮೊನ್ನೆ ನಡೆದ ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ತಾಲೂಕಿನಿಂದ ಹೆಚ್ಚಿನ ಮತಗಳು ನೀಡಿ ಗೆಲವಿಗೆ ಸಹಕರಿಸಿರುವುದು ಅತ್ಯಂತ ಸಂತೋಷಕರ ವಿಚಾರ.ಪಕ್ಷದ ವತಿಯಿಂದ ಮಾಜಿ ಸಚಿವ ವೆಂಕಟರಮಣಪ್ಪಅಧ್ಯಕ್ಷತೆಯಲ್ಲಿ ಪಟ್ಟಣದ ಎಸ್ಎಸ್ಕೆ ಬಯಲು ರಂಗಮಂದಿರದಲ್ಲಿ ಪರ ಮತ ನೀಡಿದ ಮತದಾರರನ್ನು ಅಭಿನಂದಿಸುವುದಾಗಿ ತಿಳಿಸಿದರು.