ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕಠಿಣ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ

Rashmi Kasaragodu
Updated On : 3 Jul 2014, 1:37 am

ಕೋಲಾರ: ಮಾಲೂರು ತಾಲೂಕಿನ ಮಾಸ್ತಿ ಹೋಬಳಿ ಕುಪ್ಪೂರು ಗ್ರಾಮದ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಜೆಎಂಎಸ್, ಎಸ್‌ಎಫ್‌ಐ ಮತ್ತು ಡಿವೈಎಫ್‌ಐ ತೀವ್ರವಾಗಿ ಖಂಡಿಸಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿವೆ.
15 ವರ್ಷದ ವಿದ್ಯಾರ್ಥಿನಿ ಜೂ.28ರಂದು ತರಗತಿ ಮುಗಿಸಿಕೊಂಡು ಕೆರೆಯ ಪಕ್ಕದಲ್ಲಿ ಮನೆಗೆ ಹೋಗುತ್ತಿದ್ದಾಗ ಅದೇ ಗ್ರಾಮದ ನಾಲ್ವರು ವಿದ್ಯಾರ್ಥಿನಿಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ನತದೃಷ್ಟ ವಿದ್ಯಾರ್ಥಿನಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ತೀವ್ರವಾಗಿ ನೊಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಆರೋಪಿಗಳಾದ ಮುನಿಕೃಷ್ಣ, ನಾರಾಯಣಸ್ವಾಮಿ, ಅನಿಲ್‌ಕುಮಾರ್, ಕೃಷ್ಣ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಕೂಡಲೇ ಬಂಧಿಸಬೇಕು. ಈ ಪೈಶಾಚಿಕ ಕೃತ್ಯವನ್ನು ಖಂಡಿಸದೇ ಗ್ರಾಮದ ಕೆಲವು ಹಿರಿಯರು ರಾಜಿ ಸಂಧಾನ ಮಾಡುವ ಮೂಲಕ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ. ರಾಜಿ ಸಂಧಾನ ಮಾಡಿದವರ ಮೇಲೂ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಮತ್ತು ವಿದ್ಯಾರ್ಥಿನಿಯ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ವಿ.ಗೀತಾ, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವರೆಡ್ಡಿ, ಡಿವೈಎಫ್‌ಐ ಜಿಲ್ಲಾ ಉಪಾಧ್ಯಕ್ಷ ವಿಜಯಕೃಷ್ಣ ಜಂಟಿ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement