ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮೂಲಸೌಕರ್ಯಕ್ಕೆ ಆದ್ಯತೆ: ರಾಜಣ್ಣ

Rashmi Kasaragodu
Updated On : 5 Jul 2014, 12:53 pm

ಶಿಡ್ಲಘಟ್ಟ: ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ವಿವಿಧ ಯೋಜನೆಗಳಡಿ ನೂರಾರು ಕೋಟಿ ಹಣ ಖರ್ಚು ಮಾಡಿ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು. ತಾಲೂಕಿನ ಮಳಮಾಚನಹಳ್ಳಿ ಗ್ರಾಮ ಸೇರಿದಂತೆ ಶೀಗೆಹಳ್ಳಿ, ದಿಬ್ಬೂರಹಳ್ಳಿ ಗ್ರಾಮಗಳಲ್ಲಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ 2013-14ನೇ ಸಾಲಿನ ವಿವಿಧ ಯೋಜನೆಗಳಡಿ 3.80 ಕೋಟಿ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ಹಾಗೂ ಮರು ಡಾಂಬರೀಕರಣ ಕೆಲಸಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ, ಶೌಚಾಲಯ, ನೈರ್ಮಲ್ಯ ಸೇರಿದಂತೆ ಮೂಲ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಮೊದಲ ಆದ್ಯತೆ. ಮೂಲ ಸೌಕರ್ಯಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು. ರಸ್ತೆ, ಚರಂಡಿ ಇನ್ನಿತರ ಸಾರ್ವಜನಿಕ ಆಸ್ತಿ ನಮ್ಮದು ಎನ್ನುವ ಭಾವನೆ ಜನ ಸಾಮಾನ್ಯರಲ್ಲಿ ಮೂಡಬೇಕಿದೆ. ಆಗಲೇ ಸಾರ್ವಜನಿಕ ಆಸ್ತಿಪಾಸ್ತಿ ಉಳಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಗ್ರಾಮದ ಬಿ.ಬೈರೇಗೌಡ, ಎಂ.ಜಗದೀಶ್, ರಾಜಶೇಖರ್, ಬೋದಗೂರು ಮಾರಪ್ಪ, ಚನ್ನಯ್ಯ, ಮುಗಿಲಡಿಪಿ ನಂಜಪ್ಪ, ಜೆ.ಎಂ.ವೆಂಕಟೇಶ್, ತಾದೂರು ರಮೇಶ್, ಮಾಜಿ ಪುರಸಭೆ ಸದಸ್ಯ ಮುನಿಕೃಷ್ಣಪ್ಪ, ಲೋಕೋಪಯೋಗಿ ಇಲಾಖೆಯ ಎಇಇ ಜಮೀರ್ ಅಹಮ್ಮದ್, ಜೆಇ ಶ್ರೀನಿವಾಸ್, ಇನ್ನಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement