ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಉತ್ಸವ
ಕೋಲಾರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆ.1 ಮತ್ತು 2ರಂದು ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ-2014ಅನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಮಂಜುನಾಥ್ ತಿಳಿಸಿದ್ದಾರೆ. ನೌಕರರಿಗೆ ಸಿಮಿತವಾದ ಕಲಾ ತಂಡಗಳು ಅಂದರೆ ಪೌರಣಿಕ ನಾಟಕ, ಸಾಮಾಜಿಕ ನಾಟಕ, ಕಿರು ನಾಟಕ, ಜಾನಪದ ಗೀತೆ ಗಾಯನ, ಜಾನಪದ ವೃಂದಗಾಯನ, ಕವಿಗೋಷ್ಠಿ, ಸುಗಮ ಸಂಗೀತ, ಭರತನಾಟ್ಯ, ಜಾನಪದ ನೃತ್ಯ ತಂಡಗಳು ಉತ್ಸವದಲ್ಲಿ ಭಾಗವಹಿಸಬಹುದಾಗಿದೆ. ಉತ್ಸವದಲ್ಲಿ ಭಾಗವಹಿಸುವ ನೌಕರರು ತಮ್ಮ ವಿವರಗಳನ್ನು ಜು.15 ರೊಳಗೆ ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ತಲುಪಿಸಬೇಕೆಂದು ಅವರು ಕೋರಿದ್ದಾರೆ.