ಕೋಲಾರ ಜಿಲ್ಲೆ ಅಭಿವೃದ್ಧಿಗೆ ಜಾತಿ ಪದ್ಧತಿಯೇ ಅಡ್ಡಿ
ಬಂಗಾರಪೇಟೆ: ಉಳ್ಳವರು ಯಾವುದೇ ಅಪೇಕ್ಷೆಯಿಲ್ಲದೆ ನಿಸ್ವಾರ್ಥತದಿಂದ ಸಮಾಜ ಸೇವೆಯಲ್ಲಿ ತೊಡಗಿದರೆ ತಾನಾಗೇ ಹಿಂದುಳಿದ ಸಮಾಜ ಅಭಿವೃದ್ಧಿಯಾಗುವುದರಲ್ಲಿ ಅನುಮಾನವಿಲ್ಲ ಎಂದು ಉಪ ಲೋಕಾಯುಕ್ತ ಸುಭಾಷ್ ಡಿ. ಅಡಿ ಹೇಳಿದರು. ಪಟ್ಟಣದ ಬಾಲಕೀಯರ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಸಾಯಿ ಸೇವಾ ಟ್ರಸ್ಟ್ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ಹಾಗೂ ಲೇಖನಿ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು. ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ವಕೀಲ ರಾಜಣ್ಣಶೆಟ್ಟಿ ಮಾತನಾಡಿದರು. ಇದೇ ವೇಳೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಸತ್ಕರಿಸಲಾಯಿತು. ಟ್ರಸ್ಟ್ ಅಧ್ಯಕ್ಷ ರವೀಂದ್ರ, ಲೋಕಾಯುಕ್ತ ಎಸ್ಪಿ ಸುಬ್ರಮಣಿ, ಉಪ ಪ್ರಾಂಲಶುಪಾಲ ಶಂಕರಯ್ಯ, ಕಸಾಪ ಅಧ್ಯಕ್ಷ ಅಶ್ವಥ್, ಕನ್ನಡ ಸಂಘದ ಅಧ್ಯಕ್ಷ ಪಲ್ಲವಿಮಣಿ ಮತ್ತಿತರರು ಇದ್ದರು.