ಪರಿಶೀಲನಾ ಸಭೆ 8ರಂದು
ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜು.8 ರಂದು ಬೆಳಗ್ಗೆ 10 ಗಂಟೆಗೆ 2013-14 ಹಾಗೂ 2014-15 ರ ಸಾಲಿನ ಜೂನ್ ಅಂತ್ಯದವರೆಗೆ ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಹಂಚಿಕೆ ಮಾಡಿರುವ ಅನುದಾನದ ಬಳಕೆ ಮತ್ತು ಅನುಷ್ಠಾನದ ಬಗ್ಗೆ ವಿವಿಧ ಅಭಿವೃದ್ಧಿ ಇಲಾಖೆಗಳ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ಡಾ. ವಿಶಾಲ್ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಬಾಬೂಜಿ ಪುಣ್ಯತಿಥಿ ಇಂದು
ಚಿಕ್ಕಬಳ್ಳಾಪುರ: ನಗರದ ಡಾ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜು. 6 ರಂದು ಬೆಳಿಗ್ಗೆ 9.30 ಕ್ಕೆ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರ 28ನೇ ಪುಣ್ಯತಿಥಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕೆಡಿಪಿ ಸಭೆ 11ಕ್ಕೆ
ಚಿಕ್ಕಬಳ್ಳಾಪುರ: ಜಿ.ಪಂ.ಸಭಾಂಗಣದಲ್ಲಿ ಜು.11 ರಂದು ಬೆಳಗ್ಗೆ 11 ಗಂಟೆಗೆ ಕೆಡಿಪಿ ಸಭೆಯನ್ನು ಏರ್ಪಡಿಸಲಾಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ಎನ್ .ಕೇಶವರೆಡ್ಡಿ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್ ತಿಳಿಸಿದ್ದಾರೆ.