ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮನಸ್ಸು ನಿಯಂತ್ರಿಸಿ ಅಪರಾಧದಿಂದ ದೂರವಿರಿ

Rashmi Kasaragodu
Updated On : 6 Jul 2014, 1:11 am

ಚಿಕ್ಕಬಳ್ಳಾಪುರ: ನಗರದ ಹೊರವಲಯದಲ್ಲಿನ ಅಣಕನೂರು ಗ್ರಾಮದ ಬಳಿ ಇರುವ ಜಿಲ್ಲಾ ಕಾರಾಗೃಹದಲ್ಲಿ ಅಪಾದನೆಯ ರಾಜಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ನ್ಯಾಯಾಲಯ, ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಕಾರಾಗೃಹ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವನ್ನು ನ್ಯಾಯಾಧೀಶೆ ಎಸ್. ಶೋಭಾ ಉದ್ಘಾಟಿಸಿದರು. ಅನಿರೀಕ್ಷಿತ ಬೆಳವಣಿಗೆಗಳ ನಡುವೆ ಕೈಗೊಳ್ಳುವ ದುಡುಕಿನ ನಿರ್ಧಾರದಿಂದ ಅಪರಾಧ ಕೃತ್ಯಗಳು ನಡೆಯುತ್ತವೆ. ಇದಕ್ಕೆ ಮಾನಸಿಕ ಸ್ಥಿಮಿತ ಕಳೆದುಕೊಳ್ಳುವುದು ಪ್ರಮುಖ ಕಾರಣವಾಗಿದೆ. ಬಹಳಷ್ಟು ಮಂದಿ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾದ ಮೇಲೆ ಪಶ್ಚಾತ್ತಾಪ ಅನುಭವಿಸುತ್ತಾರೆ. ಆದರೆ, ಮೊದಲೇ ದೇಹ ಮತ್ತು ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಂಡು ಜೀವನ ನಡೆಸಿದರೆ ತೊಂದರೆಗಳು ಎದುರಾಗುವುದಿಲ್ಲ ಎಂದರು. ಸಹಾಯಕ ಸರ್ಕಾರಿ ಅಭಿಯೋಜಕ ಶ್ರೀರಾಮ್ ಮಾತನಾಡಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಕಾರ್ಯದರ್ಶಿ ಪಾಪಿರೆಡ್ಡಿ, ವಕೀಲ ಬಾಬ ಫಕೃದ್ಧೀನ್, ಜಿಲ್ಲಾ ಕಾರಾಗೃಹದ ನಿವೃತ್ತ ಅಧೀಕ್ಷಕ ಎಸ್. ಲಕ್ಷ್ಮೀನಾರಾಯಣ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement