ಬಾಬೂಜಿ 28ನೇ ಪುಣ್ಯ ಸ್ಮರಣೆ
ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಭಾರತದ ಮಾಜಿ ಉಪಪ್ರಧಾನಿ ದಿ.ಬಾಬು ಜಗಜೀವನ್ ರಾಂ ಅವರ 28ನೇ ವಾರ್ಷಿಕ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಬಾಬೂಜಿಯ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ. ವಿಶಾಲ್ ಮತ್ತು ಇತರರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಬಾಬು ಜಗಜೀವನ್ ರಾಂ ಅವರು ತಮ್ಮ ಉತ್ತಮ ಆಡಳಿತ ನೀತಿಗಳಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂತಹವರನ್ನು ಸ್ಮರಿಸುವುದರ ಜೊತೆಗೆ ಅವರು ತೋರಿಸಿಕೊಟ್ಟ ಮಾರ್ಗದಲ್ಲಿ ನಡೆಯುವುದು ಮುಖ್ಯ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಜಿತ್ ಪ್ರಸಾದ್, ಡಿವೈಎಸ್ಪಿ ಮರಿಸ್ವಾಮಿ, ಚಂದ್ರಮೌಳಿ ಇದ್ದರು.