ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮುಂದಿನ ಪೀಳಿಗೆಗೆ ಪರಿಸರ ಸಂರಕ್ಷಿಸಿ

Rashmi Kasaragodu
Updated On : 7 Jul 2014, 2:00 am

ಕೋಲಾರ: ಉತ್ತಮ ಪರಿಸರಕ್ಕಾಗಿ ಹಾಗೂ ಮುಂದಿನ ಜನಾಂಗದ ಉಳಿವಿಗಾಗಿ ಗಿಡಮರಗಳನ್ನು ಬೆಳೆಸಿ ಸಂರಕ್ಷಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್. ರೇಣುಕಾ ಪ್ರಸಾದ್ ತಿಳಿಸಿದರು.
ನಗರದ ಅಂತರಗಂಗಾ ಬುದ್ದಿಮಾಂದ್ಯ ಮಕ್ಕಳ ಶಾಲೆ ಆವರಣದಲ್ಲಿ ಭಾನುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ, ಶಿಕ್ಷಣ ಇಲಾಖೆ ಹಾಗೂ ಜಾಗೃತಿ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಸಪ್ತಾಹಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಸ್.ವಿ.ಶ್ರೀಕಾಂತ್, ಗಿಡಮರಗಳ ನಾಶದಿಂದಾಗಿ ಮರಳುಗಾಡಾಗುವ ಭೀತಿ ಒಂದೆಡೆಯಾದರೆ ನಿಗದಿತ ಪ್ರಮಾಣದಲ್ಲಿ ಮಳೆಯಾಗದೇ ಅಂತರ್ಜಲ ಬತ್ತಿ ಹೋಗಿ ಕುಡಿಯಲು ನೀರು ಸಿಗದಂತಹ ದುಸ್ಥಿತಿ ನಮ್ಮ ಕಣ್ಣೆದುರಿಗೆ ಕಾಣುತ್ತಿದೆ. ಗಿಡಮರಗಳನ್ನು ಮಕ್ಕಳಂತೆ ಪೋಷಿಸಿ ಎಂದು ಕಿವಿಮಾತು ಹೇಳಿದರು.
ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಕಿಣಿಕೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳಲ್ಲಿ ಗಿಡಮರಗಳಿಂದಾಗುವ ಪ್ರಯೋಜನಗಳು ಹಾಗೂ ಅವುಗಳನ್ನು ಬೆಳೆಸುವುದರಿಂದ ನಮ್ಮ ಪರಿಸರದ ಮೇಲಾಗುವ ಪ್ರಭಾವದ ಕುರಿತು ಅರಿವು ಮೂಡಿಸಬೇಕು ಎಂದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಪುಟ್ಟಣ್ಣ ಮಾತನಾಡಿದರು. ಸ್ವಾಗತ ಕೋರಿದ ಅಂತರಗಂಗಾ ಸಂಸ್ಥೆಯ ಕಾರ್ಯದರ್ಶಿ  ಕೆ.ಎಸ್.ಶಂಕರ್, ದಾನಿಗಳು ವಿಕಲಾಂಗದರಿಗಾಗಿ ಈ ಜಾಗ ದಾನವಾಗಿ ನೀಡಿದ್ದು, ಇದನ್ನು ಸರ್ವೇ ಮಾಡಿಕೊಡಲು ತಾವು ತಹಸೀಲ್ದಾರ್ಗೆ ಅರ್ಜಿ  ಸಲ್ಲಿಸಿ ವರ್ಷ ಉರುಳಿದ್ದರೂ ಸರ್ವೇ ಕಾರ್ಯ ಮಾಡಿಲ್ಲ ಎಂದು ತಮ್ಮ ಅಳಲು ತೋಡಿಕೊಂಡಾಗ ನ್ಯಾ. ರೇಣುಕಾಪ್ರಸಾದ್ ಅವರು ಈ ಬಗ್ಗೆ ತಹಸೀಲ್ದಾರ್ರಿಗೆ ಸೂಚನೆ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಚಿನ್ನಸ್ವಾಮಿ, ವಕೀಲರ ಸಂಘದ ಕಾರ್ಯದರ್ಶಿ ಸತೀಶ್, ಜಾಗೃತಿ ಸೇವಾ ಸಂಸ್ಥೆ ಅಧ್ಯಕ್ಷ ಕೆ.ಆರ್.ಧನರಾಜ್, ವಕೀಲರ ಸಂಘದ ಅಧ್ಯಕ್ಷ ಎ.ವಿ.ಆನಂದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement