ವಾರ್ಡನ್ಗಳಿಗೆ ಶಾಸಕರ ಎಚ್ಚರಿಕೆ
ಬಂಗಾರಪೇಟೆ: ತಾಲೂಕಿನಲ್ಲಿರುವ ಎಲ್ಲಾ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಮತ್ತು ಬಿಸಿಎಂ ಹಾಸ್ಟೆಲ್ಗಳ ವಾರ್ಡನ್ಗಳ ಸಭೆಯನ್ನು ಕರೆದು ಮಕ್ಕಳಿಗೆ ಹಾಸ್ಟೆಲ್ಗಳಲ್ಲಿ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಎಚ್ಚರಿಕೆ ನೀಡಿದರು.
ಹಾಸ್ಟೆಲ್ಗಳಲ್ಲಿ ದಾಖಲಾಗಿರುವ ಬಡ ಮಕ್ಕಳಿಗೆ ಸರ್ಕಾರದಿಂದ ಸಿಗುವ ಯಾವುದೇ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಇದರಿಂದ ಅರ್ಹ ಮಕ್ಕಳು ಸೌಲಭ್ಯಗಳಿಂದ ವಂಚಿತರಾಗಿದ್ದಾರೆಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಶಾಸಕ ನಾರಾಯಣಸ್ವಾಮಿ ವಾರ್ಡ್ನ್ಗಳನ್ನು ಕರೆದು ಅವರಿಗೆ ಎಚ್ಚರಿಕೆ ನೀಡಿದರು. ಇತ್ತೀಚಿಗೆ ಹಾಸ್ಟೆಲ್ಗಳಲ್ಲಿ ಮಕ್ಕಳ ದಾಖಲಾತಿ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ದಾಖಲಾತಿ ಆಂದೋಲನ ನಡೆಯಲಿದೆ ಎಂದರು.