ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಾಲ ಸಕಾಲದಲ್ಲಿ ಪಾವತಿಸಿ: ಶಾಸಕ ಸುಧಾಕರ್

Rashmi Kasaragodu
Updated On : 7 Jul 2014, 2:06 am

ಚಿಕ್ಕಬಳ್ಳಾಪುರ: ರೈತರಿಗೆ ಆರ್ಥಿಕ ನೆರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಸಹಕಾರಿ ಬ್ಯಾಂಕುಗಳು ಉತ್ತಮವಾಗಿ ಕಾರ್ಯ ನಿರ್ವಹಿಸಲು ಎಲ್ಲರ ಸಹಕಾರ ಅಗತ್ಯ ಎಂದು ಶಾಸಕ ಕೆ.ಸುಧಾಕರ್ ಹೇಳಿದರು.
 ನಗರದಲ್ಲಿರುವ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಅಡ್ಡಗಲ್ ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಏರ್ಪಡಿಸಿದ್ದ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೆಸಿಸಿ ಸಾಲ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರಿ ಬ್ಯಾಂಕ್ಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೂ ಸಾಲ ನೀಡಿದಲ್ಲಿ ಬ್ಯಾಂಕ್ಗಳು ಇನ್ನೂ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.  
 ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮಾತನಾಡಿ, ಇತ್ತೀಚೆಗೆ ಸಹಕಾರ ಸಂಘಗಳಿಗೆ ನಬಾರ್ಡ್ ಮತ್ತು ಅಫೆಕ್ಸ್ ಬ್ಯಾಂಕ್ ಸಹ ಸಾಲ ವಿತರಿಸಲು ಮುಂದಾಗಿದ್ದು ರಾಜ್ಯ ಸರ್ಕಾರದಿಂದ ಸಹಕಾರಿ ಸಂಘಗಳ ಮುಖಾಂತರ ರೈತರಿಗೆ 3 ಲಕ್ಷದವರೆಗೆ ಬಡ್ಡಿ ರಹಿತ ಸಾಲ ದೊರೆಯುತ್ತಿದೆ. ಇದರ ಜೊತೆಗೆ ಕೇಂದ್ರ ಸರ್ಕಾರವು ಸಹ 9 ಸಾವಿರ ಪ್ರೋತ್ಸಾಹ ಧನ ನೀಡುತ್ತಿದೆ ಎಂದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement