ಡೊನೇಷನ್ ವಿರುದ್ಧ ಪ್ರತಿಭಟನೆ
ಚಿಂತಾಮಣಿ: ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ವಿಫಲವಾಗಿದ್ದಾರೆಂದು ಆರೋಪಿಸಿ, ಕರ್ನಾಟಡಕ ರೈತ ವಿದ್ಯಾರ್ಥಿ ಒಕ್ಕೂಟದ ನೂರಾರು ವಿದ್ಯಾರ್ಥಿಗಳು ಬಿಇಒ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ವಿಪರೀತವಾಗಿದ್ದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ. ಡೊನೇಷನ್ ಹಾವಳಿಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಭಾರಿ ಸಮಸ್ಯೆಯಾಗುತ್ತಿದೆ. ಅಲ್ಲದೆ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಸೂಕ್ತ ಸಮಯಕ್ಕೆ ಬಸ್ಗಳನ್ನು ಓಡಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಅಧಿಕಾರಿಗಳು 15 ದಿನಗಳ ಒಳಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸದದಿದ್ದರೆ ತೀವ್ರ ಹೋರಾಟ ಕೈಗೊಳ್ಳಲಾಗುವದು ಎಂದು ಎಚ್ಚರಿಸಿ, ಬಿಇಒ ಕೆ.ಜಿ.ರಂಗಯ್ಯ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಒಕ್ಕೂಟದ ತಾಲೂಕು ಅಧ್ಯಕ್ಷ ಕೆ.ಎನ್.ಕೃಷ್ಣ, ಮುಖಂಡರಾದ ಕೆ.ಆರ್.ಆನಂದ್, ಶಿವ, ವೆಂಕಟೇಶ್, ಶಿವಕುಮಾರ್, ಪ್ರಭಾಕರ್, ಅಶೋಕ ಚಕ್ರವರ್ತಿ, ಲಕ್ಷ್ಮಿಪತಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.