ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಶಿಶು ಅಭಿವೃದ್ಧಿ ಯೋಜನೆ ಖಾಸಗೀಕರಣಕ್ಕೆ ವಿರೋಧ

Srinivasa Murthy VN
Updated On : 10 Jul 2014, 1:09 am

ಕನ್ನಡಪ್ರಭವಾರ್ತೆ,ಕೋಲಾರ,ಜು.9
ಕೇಂದ್ರ ಸರ್ಕಾರ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಖಾಸಗೀಕರಣ ಮಾಡಬಾರದೆಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆರು ಬುಧವಾರ ಪ್ರತಿಭಟನೆ ನಡೆಸಿದರು.
 ನಗರದ ತಾಲೂಕು ಕಚೇರಿ ಮುಂದೆ ಧರಣಿ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಖಾಸಗಿಯವರಿಗೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಅನುಷ್ಟಾನದ ಜವಾಬ್ದಾರಿ ವಹಿಸಿದರೆ ಅಂಗನವಾಡಿ ಕಾರ್ಯಕರ್ತೆರ ಬದುಕು ದುಸ್ತರವಾಗುತ್ತದೆ ಎಂದು ಆರೋಪಿದರು.
ಪ್ರಧಾನಿಗೆ ಒತ್ತಾಯ: ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ಕಾರಣಕ್ಕೂ ಈ ಯೋಜನೆಯ ಖಾಸಗೀಕರಣಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ ಅವರು, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರ ವಿವಿಧ ಬೇಡಿಕೆಗಳನ್ನು ಸಹ ಈಡೇರಿಸಬೇಕೆಂದು ಮನವಿ ಮಾಡಿದರು.
 ಪ್ರತಿಭಟನೆಯಲ್ಲಿ ಅಂಗನವಾಡಿ ಕಾರ್ಯಕರ್ತರ ಸಂಘದ ಮುಖಂಡರಾದ ಜಯಲಕ್ಷ್ಮೀ, ಮುನಿರಾಜಮ್ಮ, ಮಂಜುಳ, ಅನುಸೂಯಮ್ಮ, ಉಷಾರಾಣಿ, ಕುರ್ಕಿ ಶಾಂತಮ್ಮ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement