ನೋಟ್‌ಪುಸ್ತಕ ಉಚಿತ ವಿತರಣೆ
ಬಂಗಾರಪೇಟೆ: ದಲಿತ ಸಮಾಜ ಸೇನೆ ಬರೀ ದಲಿತ ಪರ ಹೋರಾಟಕ್ಕೆ ಸೀಮಿತವಾಗದೆ ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗುವಂತೆ ನೋಟ್ ಪುಸ್ತಕಗಳನ್ನು ವಿತರಿಸಿ ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುತ್ತಿರುವುದು ಶ್ಲಾಘನೀಯ ಎಂದು ಕನ್ನಡ ಸಂಘದ ಅಧ್ಯಕ್ಷ ಪಲ್ಲವಿಮಣಿ ಹೇಳಿದರು. ಪಟ್ಟಣದ ಅಂಬೇಡ್ಕರ್ ಪ್ರತಿಮೆ ಎದುರು ದಲಿತ ಸಮಾಜ ಸೇನೆ ಹಮ್ಮಿಕೊಂಡಿದ್ದ ಉಚಿತ ನೋಟ್‌ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ದಲಿತ ಸಮಾಜ ಸೇನೆಯ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ಅಧ್ಯಕ್ಷತೆ ವಹಿಸಿದ್ದರು. ಜನಸೇನಾ ಸಂಘಟನೆಯ ರಾಜ್ಯಾಧ್ಯಕ್ಷ ವೆಂಕಟಾಚಲಪತಿ, ಲಯನ್ಸ್ ಕ್ಲಬ್ ಅಧ್ಯಕ್ಷ ಕಿಶೋರ್‌ಕುಮಾರ್, ಕೆ.ಜಿ.ಎಫ್ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಸಿ. ಅಪ್ಪಯ್ಯಗೌಡ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆರ್. ಅಶ್ವಥ್, ಸಿ.ಪಿ.ಐ.ಎಂ ಪಿ. ಶ್ರೀನಿವಾಸನ್, ಶಿಕ್ಷಕ ಮುನಿಗಾಂಧಿ, ಸಂಘಟನೆಯ ರಮೇಶ್ ಇದ್ದರು.