ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸಿ

Rashmi Kasaragodu
Updated On : 11 Jul 2014, 1:38 am

ಪಿಸಿ ಹಳ್ಳಿಯ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಡುವ ಕಾರ್ಯಕ್ರಮ


ಕೋಲಾರ: ಮಕ್ಕಳಿಗೆ ಶಾಲಾ ಪಠ್ಯಕ್ರಮದ ಭೋದನೆಯ ಜೊತೆಗೆ ಪರಿಸರ ಪ್ರಜ್ಞೆ ಮೂಡಿಸಬೇಕೆಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರೇಣುಕಾ ಪ್ರಸಾದ್ ಶಿಕ್ಷಕರಿಗೆ ಸಲಹೆ ನೀಡಿದರು.
ನಗರದ ಬಾಪೂಜಿ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಸಿ ಹಳ್ಳಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪರಿಸರವನ್ನು ಉಳಿಸಿ ಬೆಳೆಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ  ಉಂಟಾಗುವ ದುಷ್ಪಪರಿಣಾಮಗಳಿಗೆ ನಾವೇ ಕಾರಣರಾಗುತ್ತೇವೆ. ಮಕ್ಕಳ ಹೆಚ್ಚಿನ ಸಮಯ ವಿದ್ಯಾಭ್ಯಾಸಕ್ಕೆ ಒತ್ತು ನೀಡುವುದರ ಜೊತೆಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಪ್ರಯತ್ನವಾಗಲಿ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅಪರ ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಕಿಣಿಕೇರಿ ಮಾತನಾಡಿ, ಇಂದು ನೆಟ್ಟಿರುವ ಸಸಿಗಳನ್ನು ಪ್ರತಿಯೊಬ್ಬರು ಪೋಷಣೆ ಮಾಡಿ ಅವುಗಳನ್ನು ರಕ್ಷಿಸುವ ಮೂಲಕ ಪರಿಸರವನ್ನು ಕಾಪಾಡಬೇಕು. ಅರಣ್ಯ ನಾಶದಿಂದ ವನ್ಯ ಜೀವಿಗಳು ಇಂದು ನಾಡಿಗೆ ಬರುವಂತಾಗಿದೆ. ಅದನ್ನು ತಪ್ಪಿಸಲು ಮರಗಿಡಗಳನ್ನು ಬೆಳೆಸಬೇಕೆಂದು ಸಲಹೆ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ಆನಂದ್ ಮಾತನಾಡಿ, ತಮ್ಮನ್ನು ತಾವು ಹೇಗೆ ರಕ್ಷಸಿಕೊಳ್ಳುತೀರೋ ಅದೇ ರೀತಿ ಪ್ರತಿಯೊಬ್ಬರು ಪರಿಸರವನ್ನು ರಕ್ಷಿಸುವುದರ ಮೂಲಕ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದರು.
ವಕೀಲ ಹಾಗೂ ಜಾಗೃತಿ ಸೇವಾ ಸಂಸ್ಥೆಯ ಕೆ.ಆರ್.ಧನರಾಜ್ ಉಪನ್ಯಾಸ ನೀಡಿದರು. ಬಾಪೂಜಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅನುಸೂಯಮ್ಮ, ಅಪರ ಸಿವಲ್ ನ್ಯಾಯಾಧೀಶ ಚಿನ್ನಸ್ವಾಮಿ, ಪ್ರಧಾನ ಹಿರಿಯ ನ್ಯಾಯಾಧೀಶ ಹಾಗೂ ಸಿಜೆಎಂ ಎಸ್.ವಿ.ಶ್ರೀಕಾಂತ್, ವಲಯ ಅರಣ್ಯಾಧಿಕಾರಿ ಬಿಂದು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮಂಜುನಾಥ್ ಕಾರ್ಯದರ್ಶಿ ಸತೀಶ್ ಇದ್ದರು. ಮುಖ್ಯ ಶಿಕ್ಷಕ ರಾಧಾಕೃಷ್ಣ ಸ್ವಾಗತಿಸಿ, ಸಹ ಶಿಕ್ಷಕಿ ಅನುರಾಧ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement